Advertisement

ಪತ್ರಕರ್ತರ ಕಲ್ಯಾಣಕ್ಕಾಗಿ ಸರ್ಕಾರದಿಂದ ಹಲವು ಕಾರ್ಯಕ್ರಮ ; ಸಚಿವ ಕೆ.ಗೋಪಾಲಯ್ಯ

07:33 PM Feb 19, 2022 | Team Udayavani |

ಬೆಂಗಳೂರು ; ಪತ್ರಕರ್ತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

Advertisement

ಮಹಾಲಕ್ಷ್ಮಿ ಲೇ‌‌ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರ ಕಚೇರಿಯಲ್ಲಿಂದು ಪತ್ರಕರ್ತರಿಗೆ ಇ ಶ್ರಮ ಕಾರ್ಡ್ ಗಳನ್ನು ವಿತರಿಸಿ ಅವರು ಮಾತನಾಡಿದರು.

ಸಾಮಾಜಿಕ ಭದ್ರತೆ ಸೇರಿದಂತೆ ಸರಕಾರದ ‌ವಿವಿ‌ಧ ಪ್ರಯೋಜನಗಳನ್ನು‌ ಇ ಶ್ರಮ ಮೂಲಕ ಪಡೆಯಬಹುದಾಗಿದೆ. ರಾಜ್ಯದ ಶ್ರಮಿಕ ವರ್ಗದ ಜನರ ಅಭ್ಯುದಯಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ಈ ಕಾರ್ಡ್ ನ ಪ್ರಯೋಜನವನ್ನು ಪ್ರತಿಯೊಬ್ಬ ಪತ್ರ ಕರ್ತರು ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರಿಗೆ ಲೇಬರ್ ಕಾರ್ಡ್ ಒಂದೇ ಅಲ್ಲ ಸರ್ಕಾರದ‌ ವಿವಿಧ ಯೋಜನೆಗಳ ಅಡಿಯಲ್ಲಿ ಸಾಕಷ್ಟು ‌ಸೌಲಭ್ಯ ಒದಗಿಸಲಾಗಿದೆ ಎಂದರು. ಪತ್ರಿಕಾ ವಿತರಕ ಸಂಘದ ರಾಜ್ಯಾಧ್ಯಕ್ಷ ಕೆ ಶಂಭುಲಿಂಗ ಮಾತನಾಡಿ ಎರಡು ದಿನಗಳ ಕಾಲ ರಾಜ್ಯ ಕಾರ್ಮಿಕ ಇಲಾಖೆ ಹಾಗೂ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಸಂಘದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಇಂದು 500ಕ್ಕೂ ಹೆಚ್ಚು ವಿತರಕರು ಈ ಶ್ರಮ ಕಾರ್ಡ್ ಪಡೆದರು.ಬೆಂಗಳೂರು ನಗರದ ಎಲ್ಲ ಪತ್ರಿಕಾ ವಿತರಕ ರು ಬಂದು ಈ ಕಾರ್ಡ್ ಪಡೆಯಬೇಕು.ನಂತರ ಇದನ್ನು ಹಂತ ಹಂತವಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಶಂಭುಲಿಂಗ ಹೇಳಿದರು.

ಇದನ್ನೂ ಓದಿ : ಹಿಜಾಬ್ ವಿವಾದ ಭಾರತದ ಹೆಸರು ಕೆಡಿಸುವ ಪ್ರಯತ್ನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Advertisement

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮಾಜಿ ಉಪಮೇಯರ್ ಹೇಮಲತಾ ಕೆ.ಗೋಪಾಲಯ್ಯ, ರಾಜ್ಯ ಕಾರ್ಯನಿರತ ಪತ್ರ ಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ,ರವಿಕುಮಾರ್ ಜಂಟಿ ಆಯುಕ್ತರು, ಪತ್ರಿಕಾ ವಿತರಕ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗ, ಉಪಾಧ್ಯಕ್ಷ ಪ್ರಶಾಂತ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು,ಮತ್ತು ತುಮಕೂರು ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು. ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next