Advertisement

ಅಮೆರಿಕದಲ್ಲಿ ಪ್ರಧಾನಿ ಮೋದಿಗೆ ನಿದ್ದೆ ಇಲ್ಲದ ರಾತ್ರಿ ಕಳೆಯುವಂತೆ ಮಾಡ್ತೇವೆ: ಖಲಿಸ್ತಾನ್

01:59 PM Sep 16, 2021 | Team Udayavani |

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದಲ್ಲಿ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುವಂತೆ ಮಾಡುವುದಾಗಿ ಖಲಿಸ್ತಾನಿ ಭಯೋತ್ಪಾದಕ ಸಂಘಟನೆಯಾದ ಎಸ್ ಎಫ್ ಜೆ(ಸಿಖ್ಖ್ಸ್ ಫಾರ್ ಜಸ್ಟೀಸ್) ಶಪಥ ಮಾಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಟ್ರೆಂಡಿಂಗ್‍ನಲ್ಲಿ “ಬಾಯ್ಕಾಟ್ ಶಾರುಖ್ ಖಾನ್‍”…ಅಭಿಮಾನಿಗಳಿಂದ ತಿರುಗೇಟು

ಸೆಪ್ಟೆಂಬರ್ 24 ರಂದು ಪ್ರಮುಖ ನಾಲ್ಕು ದೇಶಗಳ ಮುಖಂಡರ ಪ್ರಥಮ ಕ್ವಾಡ್ ಸಮ್ಮೇಳನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಭೇಟಿ ವೇಳೆ ಶ್ವೇತಭವನದ ಹೊರಭಾಗದಲ್ಲಿ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿರುವುದಾಗಿ ಖಲಿಸ್ತಾನಿ ಭಯೋತ್ಪಾದಕ ಸಂಘಟನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ತಿಳಿಸಿದೆ.

ಸೆಕ್ಯುರಿಟಿ ಗ್ರಿಡ್ ಮೂಲಗಳ ಪ್ರಕಾರ, ಅಮೆರಿಕದಲ್ಲಿ ಎಸ್ ಎಫ್ ಜೆ ಸಂಘಟನೆಗೆ ಹೆಚ್ಚಿನ ಹಿಡಿತವಿಲ್ಲ. ತಮ್ಮ ಪ್ರಚಾರದ ಉದ್ದೇಶಗಳಿಗಾಗಿ ಹಲವು ವಾಟ್ಸಪ್ ಗ್ರೂಪ್ ಗಳನ್ನು ರಚಿಸಿಕೊಂಡಿದ್ದು, ಇದರಲ್ಲಿ ಪಾಕಿಸ್ತಾನದ ಐಎಸ್ ಐ ಏಜೆಂಟ್ ಗಳು ಸೇರಿದಂತೆ ಪಾಕಿಸ್ತಾನಿಗಳು ಇದ್ದಾರೆ. ಆದರೂ ಅಮೆರಿಕದಲ್ಲಿ ಅವರು ಬೆರಳೆಣಿಕೆಯಷ್ಟು ಮಂದಿ ಇದ್ದರೂ ಪ್ರಧಾನಿ ವಿರುದ್ಧ ಪ್ರತಿಭಟನೆ ನಡೆಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ವಿವರಿಸಿದೆ.

Advertisement

ಕೇಂದ್ರ ಸರ್ಕಾರದ ಮೂರು ಕೃಷಿ ನೀತಿಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲಿನ ಹಿಂಸಾಚಾರವನ್ನು ಖಂಡಿಸಿ ಅಮೆರಿಕದಲ್ಲಿ ಮೋದಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಈ ಭಯೋತ್ಪಾದಕ ಸಂಘಟನೆ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದಲ್ಲಿ ನಿದ್ದೆ ಇಲ್ಲದ ರಾತ್ರಿಗಳನ್ನು ಕಳೆಯುವಂತೆ ಮಾಡುತ್ತೇವೆ ಎಂದು ಎಸ್ ಎಫ್ ಜೆ ಸಂಘಟನೆಯ ಗುರ್ಪತ್ವಂತ್ ಸಿಂಗ್ ಪನ್ನೂನ್ ತಿಳಿಸಿರುವುದಾಗಿ ವರದಿ ವಿವರಿಸಿದೆ.

ಭಾರತ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2019ರ ಜುಲೈ 10ರಂದು ಕಾನೂನು ಬಾಹಿರ ಚಟುವಟಿಕೆ(ನಿಗ್ರಹ) ಕಾಯ್ದೆಯಡಿ ಸಿಖ್ಖ್ ಫಾರ್ ಜಸ್ಟೀಸ್ ಸಂಘಟನೆಯನ್ನು ನಿಷೇಧಿಸಿತ್ತು.

ವಾಷಿಂಗ್ಟನ್ ನಲ್ಲಿ ನಡೆಯಲಿರುವ ಕ್ವಾಡ್ ಸಮ್ಮೇಳನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸೆ.24ರಂದು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕದ ಅಧ್ಯಕ್ಷ ಬೈಡೆನ್ ನೇತೃತ್ವದಲ್ಲಿ ಸಮ್ಮೇಳನ ನಡೆಯಲಿದ್ದು, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್, ಜಪಾನ್ ಪ್ರಧಾನಿ ಯೋಶಿಹಿದೆ ಸುಗಾ ಭಾಗವಹಿಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next