ಹಾಸನ: ಭಾನುವಾರ ಸಂಜೆ ನಿಧನರಾದ ಮಾಜಿ ಸಚಿವ ಕೆ.ಎಚ್.ಹನುಮೇಗೌಡ (89) ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಹಾಸನ ತಾಲೂಕು ಶಾಂತಿಗ್ರಾಮ ಹೋಬಳಿ ಕೆ.ಬ್ಯಾಡರಹಳ್ಳಿಯ ಸಾರಾಪುರದ ತೋಟದಲ್ಲಿ ಸೋಮವಾರ ಮಧ್ಯಾಹ್ನ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಹಾಸನದ ಕುವೆಂಪು ನಗರದಲ್ಲಿರುವ ಅವರ ಪುತ್ರ ಸೋಮಶೇಖರ ನಿವಾಸದಲ್ಲಿ ಮಧ್ಯಾಹ್ನದ ವರೆಗೂ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹನುಮೇಗೌಡರ ಅಂತಿಮ ದರ್ಶನ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
1972 -77, 1978 -83, 1989-94, 1999-2004ರ ವರೆಗೆ ಹಾಸನ ವಿಧಾನಸಭಾ ಕ್ಷೇತ್ರವನ್ನು ಹನುಮೇಗೌಡ ಅವರು ಪ್ರತಿನಿಧಿಸಿದ್ದರು. ಮೂರು ಅವಧಿಯಲ್ಲಿ ಕಾಂಗ್ರೆಸ್‌ನಿಂದ ಶಾಸಕರಾಗಿದ್ದ ಅವರು, 1999-2004 ರವರೆಗೆ ಬಿಜೆಪಿಯಿಂದ ಶಾಸಕರಾಗಿದ್ದರು. ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು.
1999ರ ಚುನಾವಣೆಯಲ್ಲಿ ಬಿಜೆಪಿ ಸೇರಿ ಶಾಸಕರಾ ದರು. 2008ರ ವಿಧಾನಸಭಾ ಚುನಾವಣೆಯಲ್ಲಿ ಬಹುಜನ
ಸಮಾಜ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದ ಹನುಮೇಗೌಡ ಅವರು, ಮತ್ತೆ ಬಿಜೆಪಿಗೆ
ಮರಳಿ 2009ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ದೇವೇಗೌಡರ ಎದುರು ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆನಂತರ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು.