ಬೆಂಗಳೂರು: ಎಂ.ಸಿ ಸುಧಾಕರ್, ಕೊತ್ತನೂರು ಮಂಜುನಾಥ್ ಅವರ ಕಾಂಗ್ರೆಸ್ ಸೇರ್ಪಡೆಗೆ ಮಾಜಿ ಸಂಸದ ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಳೆದ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಿದವರಿಗೆ ಮಣೆ ಹಾಕಲಾಗಿದೆ. ದೆಹಲಿಯಲ್ಲೇ ಇದ್ದರೂ ತನ್ನ ಅಭಿಪ್ರಾಯವನ್ನು ಕೇಳದೆ ಪಕ್ಷಕ್ಕೆ ಸೇರ್ಪಡೆ ಮಾಡಿದ್ದಾರೆ ಎಂದು ಎಂದು ಮುನಿಯಪ್ಪ ಬೇಸರಗೊಂಡಿದ್ದಾರೆ.
ಈ ಬಗ್ಗೆ ಖಾಸಗಿ ಸುದ್ದಿವಾಹಿನಿ ಜೊತೆ ಮಾತಾನಡಿದ ಕೆ.ಎಚ್.ಮುನಿಯಪ್ಪ, ಸೂಕ್ತ ಸಮಯದಲ್ಲಿ ಎಲ್ಲವನ್ನೂ ಹೇಳುತ್ತೇನೆ. ಒಂದು ವಾರದ ನಂತರ ಮಾತನ್ನಾಡುತ್ತೇನೆ. ಸದ್ಯ ನಾನು ದೆಹಲಿಯಲ್ಲೇ ಇದ್ದೇನೆ. ಶನಿವಾರ ಬೆಂಗಳೂರಿಗೆ ವಾಪಸ್ಸಾಗುತ್ತೇನೆ. ಆ ಬಳಿಕ ಮುಂದೆ ಏನು ಎನ್ನುವುದನ್ನು ಹೇಳುತ್ತೇನೆ ಎಂದರು.
ಇದನ್ನೂ ಓದಿ:ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ನಾರಾಯಣ್‌ಗೆ ಶೋಕಾಸ್ ನೋಟಿಸ್: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ್ ಅವರಿಗೆ ಇಂದು ಶೋಕಾಸ್ ನೋಟಿಸ್ ಸಾಧ್ಯತೆಯಿದೆ.
ಲಕ್ಷ್ಮಿನಾರಾಯಣ ಹೇಳಿಕೆಯಿಂದ ನಾಯಕರು ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿನ್ನೆ ಚರ್ಚಿಸಿದ್ದರು. ಪಕ್ಷದ ಶಿಸ್ತನ್ನ ಉಲ್ಲಂಘಿಸಿರುವ ಕಾರಣ ಶೋಕಾಸ್ ನೋಟಿಸ್ ನೀಡುವ ಸಾಧ್ಯತೆಯಿದೆ.