Advertisement
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಕೋಲಾರಕ್ಕೆ ಬರುವ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಲ್ಲಿ ಸ್ಪರ್ಧಿಸಿದರೆ ಸ್ವಾಗತಿಸುತ್ತೇನೆ. ನಾವೇ ಮುಂದೆ ನಿಂತು ಅವರ ಪರ ಪ್ರಚಾರ ಮಾಡುತ್ತೇವೆ. ಅವರು ರಾಜ್ಯದ 36 ಮೀಸಲು ಕ್ಷೇತ್ರ ಹೊರತುಪಡಿಸಿ, ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಸ್ಪತಂತ್ರರು. ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಎಂದರು.
ಪಕ್ಷದಲ್ಲಿನ ಕೆಲವು ನಾಯಕರ ಧೋರಣೆಯಿಂದಾಗಿ ನನಗೆ ಅಸಮಾಧಾನ ಆಗಿದ್ದು ನಿಜ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿ, ಎಲ್ಲ ಗೊಂದಲಗಳನ್ನೂ ಬಗೆಹರಿಸಿದ್ದಾರೆ. ನೀವು ಹೈಕಮಾಂಡ್‌ಗೆ ಹತ್ತಿರವಾಗಿರುವವರು. ಸಣ್ಣಪುಟ್ಟ ಸಮಸ್ಯೆಗಳಿಗೆ ಮುನಿಸಿಕೊಳ್ಳಬೇಡಿ ಎಂದು ಕಿವಿಮಾತು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಹಿಂದಿನದೆಲ್ಲವನ್ನೂ ಮರೆತಿದ್ದೇನೆಂದು ತಿಳಿಸಿದರು. ಇದನ್ನೂ ಓದಿ : ಮೀಸಲಾತಿ ವಿಚಾರಕ್ಕೆ ಹೋರಾಟದ ಅಗತ್ಯವಿಲ್ಲ : ಸಚಿವ ಕೆ.ಸಿ.ನಾರಾಯಣಗೌಡ