ಬೆಂಗಳೂರು: ಟೀಮ್ ಇಂಡಿಯಾ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಕೇಳಿಬಂದಿದೆ. ಅಪೆಂಡಿಸೈಟಿಸ್ ಶಸ್ತ್ರಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾದ ಕೆ.ಎಲ್. ರಾಹುಲ್ ಇಂಗ್ಲೆಂಡ್ ಪ್ರವಾಸಕ್ಕೆ ಸಜ್ಜಾಗಿದ್ದಾರೆ.
ಕರ್ನಾಟಕದ ಕ್ರಿಕೆಟಿಗ ಕೆ.ಎಲ್. ರಾಹುಲ್ ಭಾರತ ತಂಡದ ಬ್ಯಾಕ್ ಅಪ್ ಓಪನರ್ ಆಗಿ ಆಯ್ಕೆಗೊಂಡಿದ್ದರು. ಪೂರ್ತಿ ಚೇತರಿಸಿಕೊಂಡರಷ್ಟೇ ಇಂಗ್ಲೆಂಡ್ ಪ್ರವಾಸಕ್ಕೆ ಎಂಬ ಷರತ್ತಿನೊಂದಿಗೆ ಇವರ ಆಯ್ಕೆ ಮಾಡಲಾಗಿತ್ತು.
ಇದನ್ನೂ ಓದಿ:ದಿನೇಶ್ ಕಾರ್ತಿಕ್ ಕಮೆಂಟೇಟರ್! ಐಸಿಸಿ ವಿಶ್ವಕಪ್ ಟೆಸ್ಟ್ ಫೈನಲ್ ವೇಳೆ ವೀಕ್ಷಕ ವಿವರಣೆ
ಐಪಿಎಲ್ ಪಂದ್ಯದ ವೇಳೆ ಪಂಜಾಬ್ ತಂಡದ ನಾಯಕನಾಗಿದ್ದ ರಾಹುಲ್ ಗೆ ದಿಢೀರ್ ಆಗಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ರಾಹುಲ್ ಅನುಪಸ್ಥಿತಿಯಲ್ಲಿ ಪಂಜಾಬ್ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಿದ್ದರು.
ಇಂಗ್ಲೆಂಡ್ ನಲ್ಲಿ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ. ರೋಹಿತ್ ಶರ್ಮಾ ಮತ್ತು ಶುಭ್ಮನ್ ಗಿಲ್ ಭಾರತದ ಮೊದಲ ಆಯ್ಕೆಯ ಆರಂಭಿಕರಾಗಿದ್ದಾರೆ.