Advertisement

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

08:45 PM Oct 15, 2024 | Team Udayavani |

ಮೈಸೂರು: ರಾಜ್ಯವಷ್ಟೇ ಅಲ್ಲದೇ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಗರದ ಆಯಕಟ್ಟಿನ ಸ್ಥಳದಲ್ಲಿ 14 ನಿವೇಶನ ಮಂಜೂರಾದ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಲ ಭೂಮಾಲಿಕನ ವಿರುದ್ಧ ಎಫ್ಐಆರ್‌ ದಾಖಲಾಗಿರುವುದಲ್ಲದೇ ತನಿಖೆಯೂ ನಡೆಯುತ್ತಿದೆ.

ಇದರ ಬೆನ್ನಲ್ಲೇ ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು. ಆದರೆ, ಮರಿಗೌಡ ಅವರು,  ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ದಸರಾ ಮುಗಿದು 3 ದಿನ ಕಳೆದಿದ್ದು, ಇಂದು ಅಥವಾ ನಾಳೆ ಖುದ್ದು ಮುಖ್ಯಮಂತ್ರಿಗಳನ್ನೇ ಭೇಟಿ ಮಾಡಿ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನ ಪರಿಷತ್‌ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಮುಡಾದಲ್ಲಿ ಅವ್ಯವಹಾರ, ಅವ್ಯವಸ್ಥೆ ಸ್ವತ್ಛಗೊಳಿಸಬೇಕಿದೆ. ಮುಡಾ ಆಡಳಿತವನ್ನು ಸ್ವತ್ಛಗೊಳಿಸಲು ಮುಖ್ಯಮಂತ್ರಿಗಳು ತೀರ್ಮಾನ ಮಾಡಿದ್ದು, ಅದಕ್ಕಾಗಿಯೇ  ಆಯೋಗ ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಡಾದಲ್ಲಿ ಅವ್ಯವಹಾರವಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧªವಾಗಿದೆ. ಆದರೆ, ಕೆ. ಮರೀಗೌಡ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವ ವಿಚಾರ ನನಗೆ ಗೊತ್ತಿಲ್ಲ ಎಂದರು.–

ಮುಡಾಗೆ ಆಡಳಿತಾಧಿಕಾರಿ ನೇಮಕ
ಮುಡಾ ಹಗರಣ ಸಂಬಂಧ ತೀವ್ರ ಮುಜುಗರ ಅನುಭವಿಸಿರುವ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಮೈಸೂರು ನಗರಾಭಿವೃದ್ಧಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next