Advertisement

ಕಾಂಗ್ರೆಸ್ ಗೆ ಸಿದ್ದು ಅನಿವಾರ್ಯ.. ಅವರಿಲ್ಲ ಎಂದರೆ ಪಕ್ಷವೇ ಇಲ್ಲ ಎಂದರ್ಥ :ಕೆ.ಎನ್. ರಾಜಣ್ಣ

09:32 PM Mar 29, 2022 | Team Udayavani |

ತುಮಕೂರು : ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾಸ್ ಲೀಡರ್, ಅವರ ಅನಿವಾರ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಕೆ ಎನ್ ರಾಜಣ್ಣ ಆಚರಿ ಹೇಳಿಕೆಯನ್ನು ನೀಡಿದ್ದಾರೆ .

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಾಮೂಹಿಕ ನಾಯಕತ್ವ ಇದೆ ಅದರಂತೆ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಎಂದು ಮಾಜಿ ಶಾಸಕ ಕೆ. ಎನ್ ರಾಜಣ್ಣ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅನಿವಾರ್ಯತೆ ಹೆಚ್ಚಿದೆ ರಾಜ್ಯದಲ್ಲಿ ಯಡಿಯೂರಪ್ಪ ಇಲ್ಲ ಎಂದರೆ ಬಿಜೆಪಿ ಇರಲ್ಲ, ಮಾಜಿ ಪ್ರಧಾನಿ ದೇವೇಗೌಡರವರು ಇಲ್ಲ ಎಂದರೆ ಜೆಡಿಎಸ್ ಇರಲ್ಲ ಅದರಂತೆ ರಾಜ್ಯದಲ್ಲಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯನವರು ಸ್ವಾಮೀಜಿಗಳಿಗೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗೆ ಉತ್ತರಿಸಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಕೂಡ ಪ್ರಮುಖ ನಾಯಕರು ಇನ್ನೂ ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಅವರು ಸ್ಪಷ್ಟನೆ ಕೂಡ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸ್ವಾಮಿಗಳನ್ನು ದೇವರಂತೆ ನೋಡುತ್ತಾರೆ ಇನ್ನೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಸಹ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ ಸ್ವಾಮೀಜಿಗಳಿಗೆ ಅಗೌರವ ತರುವ ಕೆಲಸವನ್ನು ಯಾವ ನಾಯಕರು ಮಾಡುವುದಿಲ್ಲ ಎಂದರು.

ಇದನ್ನೂ ಓದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಆಲಿಕಲ್ಲು ಮಳೆ

Advertisement

ಇದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯನವರ ಹೇಳಿಕೆಗೆ ಸಂಬಂಧಿಸಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಕೂಡ ಬೆಂಬಲಕ್ಕೆ ಇದ್ದಾರೆ ಇನ್ನು ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯನವರ ಬೆಂಬಲಕ್ಕೆ ನಿಂತಿಲ್ಲ ಎನ್ನುವುದು ಶುದ್ಧ ಸುಳ್ಳು ಎಂದು ನುಡಿದರು.

ಅವರ ಹೇಳಿಕೆಗೆ ಸಂಬಂಧಿಸಿದಂತೆ ಹಲವು ನಾಯಕರು ಅದನ್ನೇ ದೊಡ್ಡ ವಿಷಯವನ್ನಾಗಿ ಮಾಡುತ್ತಿರುವುದು ಸರಿಯಲ್ಲ ಇನ್ನೂ ಕಾಂಗ್ರೆಸ್ ಪಕ್ಷ ಗಾಂಧಿ ಹಿಂದೂವಾದಿಗಳ ಪಕ್ಷ, ಬಿಜೆಪಿ ಪಕ್ಷ ಗೂಡ್ಸೆ ಹಿಂದೂವಾದಿಗಳ ಪಕ್ಷ ಇಂದು ಬಿಜೆಪಿ ನಾಯಕರಿಗೆ ಪರೋಕ್ಷ ಟಾಂಗ್ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರ ಅನಿವಾರ್ಯತೆ ಇದೆ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್ ಪಕ್ಷ ಇರಲ್ಲ ಎನ್ನುವ ಮೂಲಕ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಈ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್. ವಿಪ.ಸದಸ್ಯ ಆರ್.ರಾಜೇಂದ್ರ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಮಾಜಿ ಶಾಸಕ ಡಾ.ಎಸ್.ರಫೀಕ್ ಅಹಮದ್ ಕಾಂಗ್ರೆಸ್ ಮುಖಂಡರಾದ ಜೆ.ಕುಮಾರ್, ಎಚ್.ವಿ.ವೆಂಕಟೇಶ್ ಸೇರಿದಂತೆ ಹಲವು ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next