Advertisement

ಬರವಿದ್ದರೂ ಸ್ಪಂದಿಸದ ಸರ್ಕಾರ: ಈಶ್ವರಪ್ಪ

03:52 AM Jan 27, 2019 | Team Udayavani |

ಹುಕ್ಕೇರಿ: ಸರ್ಕಾರ 152 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದೆ. ಆದರೆ, ಸಮಿಶ್ರ ಸರ್ಕಾರದ ಯಾವ ಸಚಿವರೂ ಪ್ರವಾಸ ಮಾಡಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿಲ್ಲ. ಸಮಿಶ್ರ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್‌.ಈಶ್ವರಪ್ಪ ಆರೋಪಿಸಿದರು.

Advertisement

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಕುಡಿಯುವ ನೀರಿಲ್ಲ. ಜಾನುವಾರುಗಳಿಗೆ ಗೋ ಶಾಲೆ ತೆರೆದಿಲ್ಲ. ಹೆಸರಿಗಷ್ಟೇ ಬರಪೀಡಿತ ತಾಲೂಕುಗಳೆಂದು ಘೋಷಿಸುವುದು ಸರಿಯಲ್ಲ. ಜಿಲ್ಲಾಧಿಕಾರಿಗಳಿಗೆ ಬರಗಾಲದ ವೆಚ್ಚಕ್ಕಾಗಿ ಹಣ ಬಿಡುಗಡೆ ಮಾಡಿದ್ದೇವೆಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ. ಯಾವ ಜಿಲ್ಲ್ಲೆಗಳಿಗೂ ಹಣ ಮುಟ್ಟಿಲ್ಲ. ಬಿಜೆಪಿ ಶಾಸಕರು 152 ತಾಲೂಕಿಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುತ್ತಿದ್ದೇವೆ. ಪ್ರತಿದಿನ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ರೈತರ ಸಮಸ್ಯೆ ಅರಿತು ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು.

ಕಾಂಗ್ರೆಸ್‌ ನಾಯಕರ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಶ್ವಾಸವಿಲ್ಲ. ಸರ್ಕಾರ ಬೀಳುವ ಭೀತಿಯಲ್ಲಿ ತಮ್ಮ ಶಾಸಕರನ್ನು ರೆಸಾರ್ಟ್‌ನಲ್ಲಿ ಕೂಡಿ ಹಾಕಿದ್ದಾರೆ. ಕಾಂಗ್ರೆಸ್‌ ನಾಯಕರಿಗೆ ಸಚಿವರನ್ನು ಹಿಡಿದಿಟ್ಟುಕೊಳ್ಳಲಾಗುತ್ತಿಲ್ಲ, ರೆಸಾರ್ಟ್‌ನಲ್ಲಿ ಎರಡು ದಿನಗಳ ಹಿಂದೆ ಕಾಂಗ್ರೆಸ್‌ನ ಶಾಸಕರಾದ ಆನಂದ್‌ ಸಿಂಗ್‌ ಮತ್ತು ಗಣೇಶ ಹೊಡೆದಾಡಿದ್ದಾರೆ. ಇವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಥ ನೀಚ ರಾಜಕೀಯದಿಂದ ಸಮಾಜದಲ್ಲಿ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಅರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next