ಬೆಂಗಳೂರು: ತಮ್ಮ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ನಡುವೆ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹಠಾತ್ ರಾಜಭವನಕ್ಕೆ ಭೇಟಿ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.
ಮಧ್ಯಾಹ್ನ 12 ಗಂಟೆಗೆ ಅವರು ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ಗೆಹ್ಲೋಟ್ ಜತೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕೇಸ್ ಯಾಕಿಲ್ಲ: ಸರ್ಕಾರ ಮತ್ತು ಪೋಲಿಸರ ವಿರುದ್ದ ಡಿಕೆ ಶಿವಕುಮಾರ್ ಗರಂ
ಆದರೆ ರಾಜ್ಯಪಾಲರ ಭೇಟಿಗೆ ಈಶ್ವರಪ್ಪ ತೆರಳಿರುವುದರ ಉದ್ದೇಶ ಏನೆಂಬುದು ತಿಳಿದು ಬಂದಿಲ್ಲ. ಕುವೆಂಪು ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರ ನೇಮಕ ಚರ್ಚೆ ಅಥವಾ ಶಿವಮೊಗ್ಗ ಘಟನೆ ಬಗ್ಗೆ ವರದಿ ನೀಡುವುದಕ್ಕಾಗಿ ರಾಜ್ಯಪಾಲರ ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಹಿಜಾಬ್ ಕಾರಣದಿಂದ ಪರೀಕ್ಷೆ ತಪ್ಪಿಸಿಕೊಂಡರೆ ಮತ್ತೆ ಅವಕಾಶ ನೀಡಲ್ಲ: ಸಚಿವ ಬಿ.ಸಿ.ನಾಗೇಶ್