Advertisement
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಈಶ್ವರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆಡಳಿತ ಪಕ್ಷದ ಸಂಸದರು ಸೇರಿ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಆರೋಪ ಮಾಡುತ್ತಿದ್ದಾರೆ. ರೋಹಿಣಿ ಸಿಂಧೂರಿ ಬಗ್ಗೆ ನನಗೆ ಅಷ್ಟು ಗೊತ್ತಿಲ್ಲ, ಆದರೆ, ಶಿಲ್ಪಾ ನಾಗ್ ನನ್ನ ಇಲಾಖೆಯಲ್ಲಿದ್ದಾಗ ಉತ್ತಮ ಕೆಲಸ ಮಾಡಿದ್ದಾರೆ. ಕೇರಳಕ್ಕೆ ಹೋಗಿ ಅಲ್ಲಿನ ಗ್ರಾಮ ಪಂಚಾಯಿತಿ ವ್ಯವಸ್ಥೆಯನ್ನು ಅಧ್ಯಯನ ಮಾಡಿಕೊಂಡು ಬಂದಿದ್ದರು. ಅವರು ಒಳ್ಳೆಯ ಐಎಎಸ್ ಅಧಿಕಾರಿ ಎಂದಷ್ಟೇ ಹೇಳಬಲ್ಲೆ ಎಂದರು.
Related Articles
Advertisement
ರಾಜ್ಯ, ಕೇಂದ್ರ ಸರ್ಕಾರಗಳು ಕೋವಿಡ್ ನಿಯಂತ್ರಣಕ್ಕೆ ಸಾಕಷ್ಟು ಕೆಲಸ ಮಾಡುತ್ತಿವೆ ಆದರೆ ವಿರೋಧ ಪಕ್ಷದವರು ಕೇವಲ ಟೀಕೆಗಾಗಿ ಟೀಕೆ ಮಾಡುತ್ತಿದ್ದಾರೆ. ಲಸಿಕೆ ವಿಚಾರದಲ್ಲೂ ಇಲ್ಲ ಸಲ್ಲದ ಆರೋಪ ಮಾಡಿದರು, ಹೀಗಾಗಿ ಜನರು ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರಲಿಲ್ಲ. ರಾಜ್ಯದಲ್ಲಿ ಕೋವಿಡ್ ಹರಡಲು ಕಾಂಗ್ರೆಸ್ ನ ಅಪಪ್ರಚಾರವೇ ನೇರ ಕಾರಣ ಎಂದು ಈಶ್ವರಪ್ಪ ಆರೋಪಿಸಿದರು.
ಸದ್ಯ ಗ್ರಾಮಾಂತರ ಪ್ರದೇಶಗಳಲ್ಲಿ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಬಂದಿದೆ. ಸರ್ಕಾರ ಟಾಸ್ಕ್ ಫೋರ್ಸ್ ರಚಿಸಿದ್ದರ ಫಲವಾಗಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.