ಶಿವಮೊಗ್ಗ: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಬಳಿಕ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದಾರೆ. “ನಮ್ಮ ಹುಡುಗರಿಗೆ ಮೆಚುರಿಟಿ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ನಾವು ಅವರನ್ನು ಸಮಾಧಾನ ಮಾಡುತ್ತೇವೆ. ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ ಎಂದು ಹೇಳಿಕೆ ನೀಡಿದ್ದಾರೆ.
ಅವರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಅಂಗೀಕಾರ ಮಾಡಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂದಿದ್ದಾರೆ.
ನಮ್ಮ ಕಾರ್ಯಕರ್ತರಿಗೆ ಪ್ರಬುಧ್ದತೆ ಕಡಿಮೆ. ಶ್ಯಾಮಪ್ರಸಾದ್ ಮುಖರ್ಜಿಗೆ ಸಾಯುತ್ತೇನೆ ಎಂದು ಗೊತ್ತಿದ್ದರು ಏಕೆ ಸಾಯಲು ಹೋದರು? ನಾನು ರಾಜೀನಾಮೆ ನೀಡಿ ಹೋಗುತ್ತೇನೆ ಎಂದು ಅವರು ಹೇಳಿದ್ದರಾ? ಪಂಡಿತ್ ದೀನದಯಾಳು ಉಪಾಧ್ಯಾಯ ಅವರನ್ನು ರೈಲಿನಲ್ಲಿ ಕೊಂದು ಹಾಕಿದರು. ಅವರು ನನಗೆ ಪಕ್ಷ ಬೇಡ ಎಂದು ಹೋರಹೋಗಿದ್ದರಾ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಮಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ರಾಜೀನಾಮೆ ನೀಡಿದ್ರೆ ಹಿಂದೂತ್ವದ ಸಿದ್ದಾಂತಕ್ಕೆ ಅಪಮಾನ ಮಾಡಿದಂತೆ. ಅನೇಕ ವರ್ಷಗಳಿಂದ ಸಂಘಟನೆ ಕಟ್ಟಿಕೊಂಡು ಬಂದಿರುವ ನಾಯಕರಿಗೆ ಅವಮಾನ ಮಾಡಿದಂತೆ. ರಾಜೀನಾಮೆ ಇದಕ್ಕೆ ಉತ್ತರವಲ್ಲ. ರಾಜೀನಾಮೆ ವಾಪಸ್ ಪಡೆಯಬೇಕು ಎಂದರು.
ಒಂದು ವೇಳೆ ರಾಜೀನಾಮೆಗೆ ರಾಜ್ಯಾಧ್ಯಕ್ಷರು ಒಪ್ಪಿಕೊಂಡರೇ ಅವರ ಸ್ಥಾನಕ್ಕೆ ಹೊಸಬರು ಬರುತ್ತಾರೆ. ಈಗ ಬಿಜೆಪಿಗೆ ಕಾರ್ಯಕರ್ತರು ಸಿಗುವುದಿಲ್ಲವೇ? ಇವರು ಆಕ್ರೋಶ ಮತ್ತು ಸಿಟ್ಟಿನಿಂದ ಮಾತ್ರ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಪ್ರಾಣ ಹೋದರೂ ಬಿಜೆಪಿ ಪಕ್ಷ ಮತ್ತು ಹಿಂದುತ್ವ ಬಿಟ್ಟು ಹೋಗುವುದಿಲ್ಲ ಎನ್ನುವ ವಿಶ್ವಾಸವಿದೆ ಎಂದು ಈಶ್ವರಪ್ಪ ಹೇಳಿದರು.