Advertisement

ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ: ಈಶ್ವರಪ್ಪ

12:11 PM Oct 03, 2020 | keerthan |

ಶಿವಮೊಗ್ಗ: ಕೇಂದ್ರ‌ ಸರ್ಕಾರ ಕೃಷಿ ಬಗ್ಗೆ ನೂತನ ಮಸೂದೆ‌ ಜಾರಿಗೆ ತಂದಾಗ ರೈತರು ಖುಷಿಪಟ್ಟರು. ಆದರೆ ಕಾಂಗ್ರೆಸ್ ಸೇರಿದಂತೆ ವಿವಿಧ ಪಕ್ಷಗಳು ರೈತರ ಹೆಸರಿನಲ್ಲಿ ವಿರೋಧ ವ್ಯಕ್ತಪಡಿಸಿವೆ‌. ರೈತರು ಹೀಗೆ ಸುಳ್ಳು ಹೇಳುವವರ ಬಗ್ಗೆ ಎಚ್ಚರದಿಂದಿರಬೇಕು. ಸತ್ಯವನ್ನು ಮುಚ್ಚಿಟ್ಟು ಸುಳ್ಳನ್ನು ವೈಭವೀಕರಿಸುವುದೇ ಕಾಂಗ್ರೆಸ್ ಕೆಲಸ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ನಗರದಲ್ಲಿ ಮಾತನಾಡಿದ ಅವರು, ಭಾರತದ ರಕ್ಷಣಾ ವ್ಯವಸ್ಥೆ ಬಲಪಡಿಸಲು ರಫೆಲ್ ಒಪ್ಪಂದ ಮಾಡಿಕೊಂಡಾಗ ಕಾಂಗ್ರೆಸ್ ಇದೊಂದು ದೊಡ್ಡ‌ ಹಗರಣ ಎಂದು ಆಪಾದಿಸಿತ್ತು. ಹಗರಣ ಸುಳ್ಳು ಎಂದು ಸುಪ್ರೀಂ ಕೋರ್ಟ್ ಹೇಳಿದ ನಂತರ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು. ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಾಗ ಅಲ್ಪ ಸಂಖ್ಯಾತರಿಗೆ ಬಿಜೆಪಿ ಅನ್ಯಾಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಬಿಂಬಿಸಿತು. ಆದರೆ ಬಿಜೆಪಿ ಹಿಂದು ಮುಸ್ಲಿಂ ಕ್ರೈಸ್ತರು ಒಂದೇ ಪೌರತ್ವದಲ್ಲಿ ಬದುಕಲಿ ಎಂಬ ಕಾರಣದಿಂದ ಮಸೂದೆ ಜಾರಿಗೆ ತರಲಾಗಿದೆ ಎಂದು ಗೊತ್ತಾದ ಬಳಿಕ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತು. ಇದೇ ರೀತಿ ಬರೀ ಸುಳ್ಳು ಹೇಳುವುದೇ ಕಾಂಗ್ರೆಸ್ ಎಂದು ಟೀಕಿಸಿದರು.

ಇದನ್ನೂ ಓದಿ:ಮಿನಿಫೈಟ್: ಶಿರಾ ಬಿಜೆಪಿ ಅಭ್ಯರ್ಥಿ ಬಹುತೇಕ ಅಂತಿಮ, ರಾಜೇಶ್ ಗೌಡ ಇಂದು ಬಿಜೆಪಿ ಸೇರ್ಪಡೆ

ಕೃಷಿ ಮಸೂದೆಯ ಬಗ್ಗೆ ಕಾಂಗ್ರೆಸ್ ಪಕ್ಷ ಹೇಳುತ್ತಿರುವ ಸುಳ್ಳನ್ನು ರೈತರು ನಂಬಬಾರದು. ರಾಜ್ಯದಲ್ಲೂ ಕೃಷಿ ಮಸೂದೆ ತಂದಾಗ ಇಲ್ಲಿಯೂ ಯಡಿಯೂರಪ್ಪ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಹಸಿರು ಶಾಲು ಹೊದ್ದಿದ್ದಾರೆ. ಸಿದ್ದರಾಮಯ್ಯ ಅವರಿಗೆ ಹಸಿರು ಶಾಲು ಇಲ್ಲ ನೀಲಿ ಶಾಲು ಇಲ್ಲ. ಬರೀ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಟೀಕೆ ಮಾಡುವುದೇ ಕಾಂಗ್ರೆಸ್ ಕೆಲಸ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರಿಗೆ ನಾಚಿಕೆಯಾಗಬೇಕು ಎಂದು ಈಶ್ವರಪ್ಪ ಕಿಡಿಕಾರಿದರು

Advertisement

Udayavani is now on Telegram. Click here to join our channel and stay updated with the latest news.

Next