Advertisement
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಏನೇ ಮಾತನಾಡಿಕೊಳ್ಳಲಿ. ನಾನಂತೂ ಎಸ್‌ಟಿ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
Related Articles
Advertisement
ನಮಗೆ ಎಸ್‌ಟಿ ಮಾನ್ಯತೆ ಸಿಗುವ ವಿಶ್ವಾಸ ಇದೆ. ಇವರು ಮಾಡುತ್ತಿರುವುದು ಒಳ್ಳೆಯದಲ್ಲ ಎಂದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಯಾಕೆ ಮಾಡಲಿಲ್ಲ. ಯಾರು ಏನು ಬೇಕಾದರೂ ಅಂದುಕೊಳ್ಳಲಿ ನಾನಂತೂ ಹೋರಾಟದಲ್ಲಿ ಇದ್ದೇ ಇರುತ್ತೇನೆ ಎಂದರು.
ಕೋರ್ ಕಮಿಟಿಯಲ್ಲಿ ಅಮಿತ್ ಶಾ ಮಾರ್ಗದರ್ಶನ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಮುಂದಿನ ಚುನಾವಣೆಯಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಹೇಳಿದ್ದಾರೆ. ಸ್ವತಂತ್ರವಾಗಿ ಪೂರ್ಣ ಪ್ರಮಾಣದಲ್ಲಿ ಪಕ್ಷ ಗೆಲ್ಲಬೇಕು. ಈ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಮಾರ್ಗದರ್ಶನ ನೀಡಿದ್ದಾರೆ. ರಾಜ್ಯದಲ್ಲಿ ಪಕ್ಷದ ಸಂಘಟನೆ ನಡೆಯುತ್ತಿದೆ. ಈ ಹಿಂದೆ 25 ಎಂಪಿ ಕ್ಷೇತ್ರಗಳನ್ನ ಗೆದ್ದಿದ್ದೇವೆ. ಉಪಚುನಾವಣೆಯಲ್ಲೂ ಗೆಲುವು ಸಾಧಿಸಿದ್ದೇವೆ. ಗ್ರಾಮ ಪಂಚಾಯತಿ ಚುನಾವಣೆಯಲ್ಲೂ ಗಮನಾರ್ಹ ಸಾಧನೆ ಮಾಡಿದ್ದೇವೆ ಎಂದರು.