Advertisement

ಪಕ್ಷದ ಒಳಗೂ ಟೀಕೆ ಮಾಡುವ ಬೆಳವಣಿಗೆ ಈಗ ಬಿಜೆಪಿಯಲ್ಲೂ ಬಂದಿದೆ: ಈಶ್ವರಪ್ಪ ಬೇಸರ

03:10 PM Jul 04, 2021 | Team Udayavani |

ಶಿವಮೊಗ್ಗ: ಪಕ್ಷದ ಒಳಗೂ ಟೀಕೆ ಮಾಡುವ ಬೆಳವಣಿಗೆ ನಮ್ಮ ಪಕ್ಷದಲ್ಲೂ ಈಗ ಬಂದು ಬಿಟ್ಟಿದೆ. ಇದನ್ನು ನಾನು ನೊಂದು ಹೇಳುತ್ತಿದ್ದೆನೆ. ಪಕ್ಷದ ಒಳಗಿರುವವರು ಟೀಕೆ ಮಾಡುವ ವ್ಯವಸ್ಥೆ ನಮ್ಮಲ್ಲಿ ಎಂದೂ ಇರಲಿಲ್ಲ. ಸಂಘಟನೆ ಶಕ್ತಿಯುತವಾಗಿ ಬೆಳೆಸಿಕೊಂಡು ಹೋಗುತ್ತಿದ್ದರೆ ಎಂದಿಗೂ ನಮ್ಮ ಪಕ್ಷಕ್ಕೆ ತೊಂದರೆಯಾಗುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

Advertisement

ಶಿವಮೊಗ್ಗ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಮನಬಿಚ್ಚಿ ಮಾತನಾಡಿದ ಅವರು, ಕೋವಿಡ್ ಬರುತ್ತೋ.. ಸರ್ಕಾರ ಬರುತ್ತೋ.. ಮುಖ್ಯಮಂತ್ರಿ ಬದಲಾಗುತ್ತಾರೋ… ಇರುತ್ತಾರೋ ಗೊತ್ತಿಲ್ಲ. ಆದರೆ ಕಾರ್ಯಕರ್ತರು ತಮ್ಮ ನಿಷ್ಠೆ, ಸಿದ್ದಾಂತ ನಂಬಿ ಸಂಘಟನೆ ಬೆಳೆಸಬೇಕಿದೆ ಎಂದರು.

ಇದನ್ನೂ ಓದಿ:ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ 3ನೇ ಅಲೆ ಗರಿಷ್ಟ ಮಟ್ಟಕ್ಕೆ ಏರಿಕೆ ಸಾಧ್ಯತೆ : ಮಣೀಂದ್ರ

ಕಾಂಗ್ರೆಸ್ ನ ಬಡಿದಾಟ ಇರಬಹುದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇರಬಹುದು. ಯಾರೇ ಏನೇ ಮಾತನಾಡಿದರೂ ಪರವಾಗಿಲ್ಲ. ಕಾರ್ಯಕರ್ತರು ಸಂಘಟನೆ ಶಕ್ತಿಯುತವಾಗಿ ಬೆಳೆಸುವ ನಿಟ್ಟಿನಲ್ಲಿ ಮಾತ್ರ ಯೋಚಿಸಬೇಕು. ಯಾರಾದರೂ ಟೀಕೆ ಮಾಡಲಿ, ಯಾರಾದರೂ ಏನಾದರೂ ಮಾತನಾಡಿ ಕೊಂಡು ಹೋಗಲಿ. ಪಕ್ಷದ ಒಳಗೆ ಇರಲಿ, ಹೊರಗೆ ಆರೋಪ ಮಾಡಲಿ. ವಿರೋಧಿಗಳ ಟೀಕೆಗೆ ಸಂಘಟನೆ ಮೂಲಕವೇ ಉತ್ತರ ನೀಡಬೇಕು. ಸಂಘಟನೆ ಬೆಳೆಸುವ ನಿಟ್ಟಿನಲ್ಲಿ ಕಾರ್ಯಕರ್ತರು ಗಮನ ಕೇಂದ್ರಿಕರಿಸಬೇಕು. ಕೋವಿಡ್ ನಂತಹ ಸಂಕಷ್ಟವನ್ನು ನಾವು ಸಂಘಟನೆ ಮುಖಾಂತರ ಜಾಗೃತಿ ಮೂಡಿಸಿ ಎದುರಿಸಿದ್ದೇವೆ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next