ಶಿವಮೊಗ್ಗ: ತೈಲ ಬೆಲೆ ಏರಿಕೆಯನ್ನು ಖಂಡಿಸಿ ದೇಶಾದ್ಯಂತ ಇಂದು ಲಾರಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು,” ನಾನು ನಿಮಗೆ ಪ್ರಾರ್ಥನೆ ಮಾಡುತ್ತೇನೆ. ತಕ್ಷಣವೇ ಮುಷ್ಕರವನ್ನು ನಿಲ್ಲಿಸಬೇಕು” ಎಂದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ತೈಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿದೆ. ಅದರೆ, ಪೆಟ್ರೋಲ್,ಡೀಸೆಲ್ ಬೆಲೆ ಜಾಸ್ತಿ ಮಾಡುವುದು ನಮ್ಮ ಕೈಯಲ್ಲಿ ಇಲ್ಲ. ಕೇಂದ್ರ ಸರ್ಕಾರ ಬೆಲೆಯನ್ನು ಎಷ್ಟು ಕಡಿಮೆ ಮಾಡಬೇಕೋ ಅಷ್ಟು ಕಡಿಮೆ ಮಾಡುತ್ತದೆ ಎಂದರು.
ಇದನ್ನೂ ಓದಿ:ಕುಮಾರಸ್ವಾಮಿ ಪಕ್ಷ ಜೋಕರ್ ನಂತೆ: ಸಿ.ಪಿ. ಯೋಗೀಶ್ವರ್ ಟೀಕೆ
ಮುಷ್ಕರ ಮಾಡುವುದರಿಂದ ನಿಮಗೆ ಮಾತ್ರವಲ್ಲದೆ, ರೈತರು, ಕೂಲಿ ಕಾರ್ಮಿಕರು ಎಲ್ಲರಿಗೂ ತೊಂದರೆಯಾಗುತ್ತದೆ. ಮುಷ್ಕರವೇ ಎಲ್ಲದಕ್ಕೂ ಪರಿಹಾರವಲ್ಲ. ದಯಮಾಡಿ ಮುಷ್ಕರ ವಾಪಾಸ್ ಹಿಂಪಡೆಯಿರಿ ಎಂದು ಸಚಿವ ಈಶ್ವರಪ್ಪ ಮನವಿ ಮಾಡಿದರು.
ಇದನ್ನೂ ಓದಿ: ಜಿಎಸ್ ಟಿ, ತೈಲ ಬೆಲೆ ಏರಿಕೆ ಖಂಡಿಸಿ ದೇಶವ್ಯಾಪಿ ಮಾರುಕಟ್ಟೆ ಬಂದ್, ಮಿಶ್ರ ಪ್ರತಿಕ್ರಿಯೆ