Advertisement
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ನ್ಯಾಯಯುತವಾಗಿ ಮೀಸಲಾತಿ ಸಿಗಬೇಕಿದೆಯೋ ಅವರಿಗೆ ಮೀಸಲಾತಿ ಕೊಡಬೇಕು. ಕರ್ನಾಟಕದಲ್ಲಿ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ಸಮಿತಿ ಮಾಡಲಾಗುವುದು. ಆ ಸಮಿತಿ ನೀಡುವ ವರದಿ ಆಧರಿಸಿ ಮೀಸಲಾತಿ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Related Articles
Advertisement
ಮುಖ್ಯಮಂತ್ರಿ ಮತ್ತು ವಿಜಯೇಂದ್ರ ಬಗ್ಗೆ ಯತ್ನಾಳ್ ದೂರು ನೀಡಿದ್ದಾರೆ. ಯತ್ನಾಳ್ ಬಳಿ ಸಾಕ್ಷಿ ಏನಿದೆಯೋ ನೋಡೋಣ. ಕೇಂದ್ರ ನಾಯಕರಿಗೆ ಸಾಕ್ಷಿ ಸಹಿತ ಹೈಕಮಾಂಡ್ ಗೆ ಹನ್ನೊಂದು ಪುಟದ ಉತ್ತರ ನೀಡಿದ್ದೇನೆ ಎಂದಿದ್ದಾರೆ. ಇವರ ಉತ್ತರ ನೋಡಿ ಹೈಕಮಾಂಡ್ ಕ್ರಮ ಕೈಗೊಳ್ಳಲಿದೆ ಎಂದರು.
ಉಪ್ಪು ತಿಂದವರು ನೀರು ಕುಡಿಯುತ್ತಾರೆ: ಐಎಂಎ ಪ್ರಕರಣದ ಬಗ್ಗೆ ನಾನು ರಾಜಕೀಯವಾಗಿ ತೆಗೆದುಕೊಳ್ಳುವುದಿಲ್ಲ. ಸಿದ್ದರಾಮಯ್ಯ, ಕುಮಾರಸ್ವಾಮಿಯವರ ಬಗ್ಗೆ ಸಿಬಿಐ ಸ್ಪಷ್ಟಪಡಿಸಿದೆ. ಆರ್.ವಿ.ದೇಶಪಾಂಡೆ, ಪರಮೇಶ್ವರ್ ಗೂ ಐಎಂಎನಿಂದ ಹಣ ಬಂದಿದೆ ಎಂಬ ಆರೋಪ ಇದೆ. ಇಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಇವರೆಲ್ಲರೂ ಆರೋಪದಿಂದ ಮುಕ್ತರಾಗಲಿ ಎಂದು ಆಶಿಸುತ್ತೇನೆ. ಒಂದು ವೇಳೆ ತಪ್ಪು ಮಾಡಿದ್ದರೆ ಉಪ್ಪು ತಿಂದವರು ನೀರು ಕುಡಿಯುತ್ತಾರೆ ಅಷ್ಟೇ ಎಂದು ಈಶ್ವರಪ್ಪ ಹೇಳಿದರು.
ಇದನ್ನೂ ಓದಿ: ಗ್ರಾಮ ವಾಸ್ತವ್ಯದಲ್ಲಿ ತಹಶೀಲ್ದಾರ್, ಸಿಬ್ಬಂದಿ ಡಾನ್ಸ್
ಹುಣಸೋಡು ಸ್ಫೋಟ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಜೊತೆ ಮಾತನಾಡಿದ್ದೇನೆ. ಪ್ರಕರಣದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಕುರಿತು ಮಾಹಿತಿ ಪಡೆಯಲು ತನಿಖಾಧಿಕಾರಿಗಳು ಜಿಲ್ಲಾಧಿಕಾರಿಯನ್ನು ಕರೆದಿದ್ದಾರೆ ಎಂದು ಹೇಳಿದರು.