Advertisement
ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟ್ಟ ಕುರುಬ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಬೆಟ್ಟಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಕಳೆದ ನಾಲ್ಕು ದಶಕಗಳಿಂದ ಹೋರಾಟ ನಡೆದಿತ್ತು. ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಕೂಡ ನಡೆಸಲಾಗಿತ್ತು. ಇದೀಗ ಹೋರಾಟಕ್ಕೆ ಜಯ ಸಂದಿದೆ ಎಂದರು.
Related Articles
Advertisement
ಮತಾಂತರ ನಿಷೇಧ ಕಾಯ್ಧೆ ಮಸೂದೆ ಮಂಡನೆ ವೇಳೆ ಬಿಲ್ ನ ಪ್ರತಿಯನ್ನು ಅರಿದು ಹಾಕಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿದ ಈಶ್ವರಪ್ಪ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಓಲೈಕೆ ಮಾಡುವ ಸಲುವಾಗಿ ಕಾಂಗ್ರೆಸ್ ಸದಸ್ಯರು ಈ ರೀತಿ ಮಾಡಿದ್ದಾರೆ ಎಂದು ಕಿಡಿ ಕಾರಿದರು.
ಇದನ್ನೂ ಓದಿ:ಠೇವಣಿದಾರರ ಹಿತಾಸಕ್ತಿ ಕಾಯಿದೆ ಮಂಡನೆ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ನಿರ್ಧಾರ
ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ನಡೆಸುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಅಖಂಡ ಭಾರತವನ್ನು ಒಡೆದು ಹಾಕಿದ್ದೇ ಕಾಂಗ್ರೆಸ್. ಈಗ ಅದನ್ನು ಜೋಡಿಸುವ ಕೆಲಸ ಮಾಡುತ್ತಿದ್ದಾರೆ. ಅನೇಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಕಾಂಗ್ರೆಸ್ ನವರು ಬಲಿ ಪಡೆದರು. ಈಗ ಭಾರತ್ ಜೋಡೊ ಕಾರ್ಯಕ್ರಮ ಮಾಡುತ್ತಿದ್ದಾರೆ. ನೀವು ನಿಮ್ಮ ಸ್ಲೋಗನ್ ಬದಲಾವಣೆ ಮಾಡಿಕೊಂಡು ಕಾರ್ಯಕ್ರಮ ಮಾಡಿ. ಹಿಂದೆ ಮಾಡಿದ ತಪ್ಪಿಗೆ ಪಶ್ಚಾತ್ತಾಪವಾಗಿ ಈ ಕಾರ್ಯಕ್ರಮ ಎಂದು ಹೇಳಿ. ಅಖಂಡ ಭಾರತ ಒಗ್ಗೂಡಬೇಕು. ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಎಲ್ಲವೂ ಒಟ್ಟಾಗಿ ಅಖಂಡ ಭಾರತವಾಗಬೇಕು ಎಂದರು.
ನನ್ನ ವಿರುದ್ಧ ಆರೋಪ ಕೇಳಿ ಬರುತ್ತಿದ್ದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ಪ್ರಕರಣದಿಂದ ಕ್ಲೀನ್ ಚಿಟ್ ಸಿಕ್ಕ ನಂತರ ಮತ್ತೆ ಸಚಿವ ಸ್ಥಾನ ನೀಡುವ ವಿಶ್ವಾಸವಿತ್ತು. ನನಗೆ ಕ್ಲೀನ್ ಚಿಟ್ ಸಿಕ್ಕನಂತರ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಮತ್ತೆ ಸಚಿವ ಸ್ಥಾನ ನೀಡದಿರುವುದರಿಂದ ಸಹಜವಾಗಿಯೇ ಅಸಮಾಧಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.