ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಮಂತ್ರಿ ಮೋದಿ ವಿರುದ್ಧ ಸಿದ್ಧರಾಮಯ್ಯ ಬಳಸುತ್ತಿರುವ ಭಾಷೆ ಸರಿಯಿಲ್ಲ. ಸಿದ್ಧರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ಎಂದು ಸುಮ್ಮನಿದ್ದೆನೆ. ಇಲ್ಲವಾಗಿದ್ದರೆ, ಅವರ ವಿರುದ್ಧವೂ ಕೆಟ್ಟ ಭಾಷೆ ಬಳಸುತ್ತಿದ್ದೆ. ನನಗೂ ಕೆಟ್ಟ ಭಾಷೆ ಬಳಸುವುದು ಗೊತ್ತಿದೆ. ನಾನು ಬಹಳ ತಡೆದುಕೊಂಡಿದ್ದೆನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ಧರಾಮಯ್ಯನವರಿಗೆ ನಾನು ವೈಯಕ್ತಿಕವಾಗಿ ಪ್ರಾರ್ಥನೆ ಮಾಡುತ್ತೆನೆ. ವಿರೋಧ ಪಕ್ಷವಾಗಿ ಬೇಕಾದಾಗ ಟೀಕೆ ಮಾಡಿ ತೊಂದರೆ ಇಲ್ಲ. ಆದರೆ, ನೀವು ಪ್ರಧಾನಿ ಹಾಗೂ ಸಿಎಂ ಬಗ್ಗೆ ವೈಯಕ್ತಿಕ ಟೀಕೆ ಮಾಡುವುದು ಸರಿಯಿಲ್ಲ. ಎಂದರು.
ನರೇಂದ್ರ ಮೋದಿ, ಕೋಮುವಾದಿ, ಕೊಲೆಗಡುಕ ಎನ್ನುತ್ತಾರೆ. ಸುಳ್ಳಿನ ಸರದಾರ ಎಂದು ಸಿದ್ಧರಾಮಯ್ಯ ಹಗುರವಾದ ಪದ ಬಳಕೆ ಮಾಡುತ್ತಿದ್ದಾರೆ. ಯಡಿಯೂರಪ್ಪ ಹಸಿರು ಶಾಲು ಹಾಕಿಕೊಳ್ಳುತ್ತಾರೆ, ನಾಚಿಕೆ ಆಗಲ್ವ ಎಂದು ಟೀಕೆ ಮಾಡುತ್ತಾರೆ. ರೈತ ನಾಯಕರಾಗಿರುವ ಯಡಿಯೂರಪ್ಪ , ರೈತರ ಪರವಾಗಿ ಹಲವಾರು ಹೋರಾಟ ಮಾಡಿದವರು ಎಂದು ಹೇಳಿದರು.
ಸಿದ್ಧರಾಮಯ್ಯನವರ ಭಾಷೆ ಇದು ಸರಿಯಲ್ಲ.ಇಡೀ ಪ್ರಪಂಚ ಮೆಚ್ಚಿದ ವ್ಯಕ್ತಿ ಬಗ್ಗೆ ಹಗುರವಾದ ಮಾತುಗಳು ಸಲ್ಲದು. ಅದರಲ್ಲೂ ನೆರೆ ವಿಚಾರದಲ್ಲಿಯೂ ರಾಜಕೀಯ ಮಾಡಬೇಡಿ ಎಂದು ಮನವಿ ಮಾಡಿದ ಈಶ್ವರಪ್ಪ, ರಾಜ್ಯದಲ್ಲಿ ನೆರೆ ಬಂದಿದ್ದು, ಹಿಂದೆ ಯಾವುದೇ ಸರ್ಕಾರ ನೀಡದ ರೀತಿಯಲ್ಲಿ ನಮ್ಮ ಸರ್ಕಾರ ಪರಿಹಾರ ನೀಡುತ್ತಿದೆ. ನಮ್ಮ ನಿರೀಕ್ಷೆ ಮೀರಿ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಬಿಡುಗಡೆ ಮಾಡುವ ಆಶಯ ಹೊಂದಿದ್ದೆವೆ. ನಾವು ಅತಿ ಹೆಚ್ಚು ಅನುದಾನ ತರುವ ನಿರೀಕ್ಷೆಯಲ್ಲಿದ್ದೆವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೂಜಾಡಿರುವ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ,ಅದು ಅವರ ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಈಶ್ವರಪ್ಪ ಹೇಳಿದರು.