Advertisement

ರಾಕ್ಷಸರಿಗೆ ಕೋವಿಡ್ ಬರುವುದಿಲ್ಲ.. ನನ್ನಂತವನಿಗಂತೂ ಸೋಂಕು ಬರುವುದಿಲ್ಲ: ಈಶ್ವರಪ್ಪ

11:16 AM May 22, 2020 | keerthan |

ಶಿವಮೊಗ್ಗ: ಕೋವಿಡ್-19 ಎಂಬ ಭಯದಿಂದ ಶಾಸಕರು, ಸಚಿವರು, ಸಂಸದರು ಮನೆಯಲ್ಲೇ ಇದ್ದರೆ ಅಭಿವೃದ್ಧಿ ಕಾಮಗಾರಿಗಳು ನಡೆಯುವುದು ಹೇಗೆ? ಕೋವಿಡ್-19 ವನ್ನು ಎದುರಿಸುತ್ತೇನೆ ಎಂಬ ಆತ್ಮಸ್ಥೈರ್ಯ ಇರಬೇಕು. ಇದರ ಜೊತೆಗೆ ಜಾಗರೂಕತೆಯೂ ಬೇಕು. ರಾಕ್ಷಸರಿಗೆ ಕೋವಿಡ್ ಬರುವುದಿಲ್ಲ. ನನ್ನಂತವನಿಗಂತೂ ಸೋಂಕು ಬರುವುದಿಲ್ಲ ಎಂದು ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.

Advertisement

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇಡೀ ಪ್ರಪಂಚ ನರೇಂದ್ರ ಮೋದಿ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಜನ ಲಕ್ಷಾಂತರ ರೂಪಾಯಿ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಕೋವಿಡ್-19 ಬಗ್ಗೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ಮಾಡುತ್ತಿದ್ದೇವೆ.  ಇಂಥ ಸಂದರ್ಭದಲ್ಲಿ ಸೋನಿಯಾ ಗಾಂಧಿಯ ಹೇಳಿಕೆಯಿಂದ ಎಲ್ಲರಿಗೂ ನೋವಾಗಿದೆ ಎಂದರು.

ಸೋನಿಯಾ ಗಾಂಧಿ ತಮ್ಮ ಹೇಳಿಕೆ ವಾಪಸ್ ಪಡೆಯಲಿ ಎಂದು ನಾನು ಹೇಳುವುದಿಲ್ಲ. ಸಾಗರ ಒಬ್ಬ ವಕೀಲ ತನ್ನ ಕೆಲಸವನ್ನು ತಾನು ಮಾಡಿದ್ದಾನೆ. ಸಬ್ ಇನ್ಸ್ ಪೆಕ್ಟರ್ ಎಫ್ ಐಆರ್ ಹಾಕಿರುವುದು ಸರಿಯೋ ತಪ್ಪೋ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದರು.

ಕಾಂಗ್ರೆಸ್ ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮೋದಿ ಅವರು ಪಿಎಂ ಕೇರ್ ಫಂಡ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬರೆದಿದೆ. ಅಲ್ಲದೆ ಪಿಎಂ ಕೇರ್ ಫಂಡ್ ಫ್ರಾಡ್ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ ಟೀಕಿಸಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ  ಸಾಗರದ ವಕೀಲ ಪ್ರವೀಣ್ ಎಂಬುವರು ದೂರು ನೀಡಿದ್ದರು. ಸಾಗರ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದ್ದು, ಪ್ರಕರಣವನ್ನು ಕೈಬಿಡಬೇಕೆಂದು ಕೆಪಿಸಿಸಿ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next