Advertisement

ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು : ಈಶ್ವರಪ್ಪ

03:25 PM Jul 19, 2021 | Team Udayavani |

ಶಿವಮೊಗ್ಗ : ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಚರ್ಚೆ ಈಗ ವೇಗ ಪಡೆದುಕೊಂಡಿದೆ. ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ ಎಂದು ಹೇಳಲಾದ ಆಡಿಯೋಈ ಈಗ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ, ಆಡಿಯೋ ನನ್ನದಲ್ಲ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆ ಅಗತ್ಯವಿಲ್ಲ ಎಂದು  ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.

Advertisement

ನಳೀನ್ ಕುಮಾರ್ ಕಟೀಲು ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ. ಯಾರೋ ಹುಚ್ಚರು ಹೀಗೆ ಮಾಡಿದ್ದಾರೆ. ಯಾರೋ ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,164 ಕೋವಿಡ್ ಪ್ರಕರಣ ಪತ್ತೆ, 499 ಮಂದಿ ಸಾವು

ನಳೀನ್ ಕುಮಾರ್ ಕಟೀಲು ಅವರನ್ನು ಈ ವಿಷಯದಲ್ಲಿ ಬಲಿಪಶು ಮಾಡಬೇಡಿ. ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿದ್ದರೆ ಇಂದು ಈ ರೀತಿಯ ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ.

ನಾನು ಎಂ ಎಲ್ ಎ ಆಗುವಾಗ ಹಿರಿಯರೇ ಟಿಕೆಟ್ ನೀಡಿದರು. ಇಲಾಖೆ ಸಚಿವನಾದಾಗಲೂ ಪಕ್ಷ ಹಾಗೂ ಸಂಘಟನೆ ಹೇಳಿದಂತೆ ಕೇಳಿದ್ದೇನೆ. ನಾನು ಮಂತ್ರಿ ಸ್ಥಾನವನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ದೇವೇಗೌಡ ವಿರುದ್ಧ ಕನಕಪುರದಲ್ಲಿ ಸ್ಪರ್ಧಿಸುವ ಉದ್ದೇಶದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ ಗೆ ರಾಜೀನಾಮೆ ನೀಡಿದ್ದೆ.  ಆಡಳಿತದಲ್ಲಿ ಯುವಕರಿಗೆ ಪ್ರಾಧನ್ಯತೆ ನೀಡಲು ಪಕ್ಷ ತೀರ್ಮಾನಿಸಿದೆ ಅವರ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿದ್ದಾರೆ.

Advertisement

ಹಿಂದು ಸಮಾಜ ಹಾಗೂ ದೇಶಕ್ಕಾಗಿ ಉಸಿರಿರುವವರೆಗೆ ಹೋರಾಡುತ್ತೇನೆ. ನಾನು ಬಿಜೆಪಿ ಕಾರ್ಯಕರ್ತ. ನನಗೆ ಹಿಂದು ಸಮಾಜ ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಹೊಂದಿದ್ದೇನೆ. ದೇಶ ಹಾಗೂ ಸಮಾಜದ ಬಗ್ಗೆ ಹಿಂದಿನಿಂದಲೂ ಹೋರಾಡುತ್ತೇನೆ. ರಾಜಕಾರಣದಲ್ಲಿ ಯಾರೂ ಗೂಟ ಹೊಡೆದುಕೊಂಡು ಕೂರಲು ಸಾಧ್ಯವಿಲ್ಲ. ಎಂದಿದ್ದಾರೆ.

ಇನ್ನು, ಮಂತ್ರಿ ಸ್ಥಾನ ಹೋದರೆ ಗೂಟ ಹೋಯಿತು ಎಂದುಕೊಳ್ಳುತ್ತೇನೆ ಎಲ್ಲಿವರೆಗೆ ಸಂಘಟನೆ ಅವಕಾಶ ನೀಡುತ್ತದೆಯೋ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿರುತ್ತೇನೆ. ಬಳಿಕ ಸಂಘಟನೆ ಯಾವ ಜವಾಬ್ದಾರಿ‌ ನೀಡುತ್ತದೆಯೋ ಅದಕ್ಕೆ ಬದ್ಧನಾಗಿರುತ್ತೇನೆ  26ಕ್ಕೆ ಶಾಸಕಾಂಗ ಸಭೆ ಬಗ್ಗೆ ನನಗೆ ಮಾಹಿತಿಯಿಲ್ಲ. ಶಾಸಕಾಂಗ ಸಭೆ ನಡೆದರೆ ಅದರಲ್ಲಿ ವಿಶೇಷವೇನೂ ಇಲ್ಲ ಎಂದು ಹೇಳಿದ್ದಾರೆ.

ಬ್ಯಾಗ್ ನಲ್ಲಿ ಯಡಿಯೂರಪ್ಪ ಹಾರ ತುರಾಯಿ ಒಯ್ದಿದ್ದರು : ಈಶ್ವರಪ್ಪ

ಎಚ್. ಡಿ. ಕುಮಾರ ಸ್ವಾಮಿ ಅವರು ಗ್ರಾಮ ಪಂಚಾಯತ್ ಸದಸ್ಯನಿಗಿಂತಲೂ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.  ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ ಅವರನ್ನು ಸನ್ಮಾನಿಸಲು ಬ್ಯಾಗ್ ನಲ್ಲಿ ಹಾರ ತುರಾಯಿ ಒಯ್ಯುತ್ತಿದ್ದರು. ಅದರಲ್ಲಿ ಏನಿತ್ತು ಎಂದು ಕೇಳಬೇಕಾ..? ಯಡಿಯೂರಪ್ಪ ಅವರು ಕೇಂದ್ರದ ನೂತನ ಸಚಿವರನ್ನು ಅಭಿನಂದಿಸಲು ಬ್ಯಾಗ್ ನಲ್ಲಿ ಹಾರ ತುರಾಯಿ ಒಯ್ದಿದ್ದರು ಎಂದು ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಗ್ ಪಡೆಯುವಷ್ಟು ಕೀಳುಮಟ್ಟದ ರಾಜಕಾರಣಿಯಲ್ಲ. ಯಡಿಯೂರಪ್ಪ ಅವರೂ ಯಾರನ್ನೂ ಮೆಚ್ಚಿಸಬೇಕಿಲ್ಲ. ಕುಮಾರಸ್ವಾಮಿ ಅವರು ಹೀಗೆ ಮಾತನಾಡುತ್ತಿದ್ದರೆ ಜನ ಛೀಮಾರಿ ಹಾಕುತ್ತಾರೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ್: ಉತ್ತರಕಾಶಿಯಲ್ಲಿ ಮೇಘಸ್ಫೋಟಕ್ಕೆ ಮೂವರ ಸಾವು, ನಾಲ್ಕು ಮಂದಿ ನಾಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next