Advertisement
ಒಟ್ಟು 41 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದ್ದು, 1,17,302 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.ಬೆಂಗಳೂರು ನಗರ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿದ್ದು, ಎಲ್ಲೆಡೆಯೂ ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶನಿವಾರ ಬೆಳಗ್ಗೆ 10ರಿಂದ 11 ಗಂಟೆವರೆಗೆ ಎಲ್ಲರಿಗೂ ಸಾಮಾನ್ಯ ಪರೀಕ್ಷೆ (ಪೇಪರ್-1) ಇರುತ್ತದೆ. ಅದಾದ ಬಳಿಕ ಅದೇ ಪರೀಕ್ಷಾ ಕೇಂದ್ರಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿ ಪ್ರತ್ಯೇಕ ಪರೀಕ್ಷೆ (ಪೇಪರ್-2) ನಡೆಯಲಿದೆ. ಅದು ಮಧ್ಯಾಹ್ನ 12ರಿಂದ 2ರ ವರೆಗೆ ಇರುತ್ತದೆ. ಒಮ್ಮೆ ಪರೀಕ್ಷಾ ಕೇಂದ್ರದೊಳಗೆ ಅಭ್ಯರ್ಥಿಗಳು ಹೋದ ಮೇಲೆ ಎರಡೂ ಪತ್ರಿಕೆಗಳ ಪರೀಕ್ಷೆ ಮುಗಿದ ಬಳಿಕವೇ ಹೊರಹೋಗಲು ಬಿಡುವುದು ಎಂದು ಅವರು ವಿವರಿಸಿದರು.
ನೋಂದಣಿ ಸಂಖ್ಯೆ ಕಳೆದುಕೊಂಡ 800ಕ್ಕೂ ಹೆಚ್ಚು ಮಂದಿ ಕೆ-ಸೆಟ್ ಪರೀಕ್ಷೆಯ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳದ ಕಾರಣ ಅವರ ಎಲ್ಲ ಇ-ಮೇಲ್‌ಗಳಿಗೆ ನೋಂದಣಿ ಸಂಖ್ಯೆ ರವಾನಿಸುವ ಕೆಲಸವನ್ನು ಕೆಇಎ ಮಾಡಿದೆ. ಎಲ್ಲರೂ ಪರೀಕ್ಷೆ ತೆಗೆದುಕೊಳ್ಳಲು ಇದು ನೆರವಾಗಿದೆ ಎಂದು ತಿಳಿಸಿದ್ದಾರೆ.