ಬೆಂಗಳೂರು: ಜ್ಯೋತಿಷಿಗಳ ಮಾತು ಕೇಳಿ ಅಭ್ಯರ್ಥಿ ಹಾಕದೆ ಜನರ ನಾಡಿಮಿಡಿತ ಅರಿತು ಅಭ್ಯರ್ಥಿ ಹಾಕಿದ್ದರೆ ಬಹುಶಃ ಕಾಂಗ್ರೆಸ್ ಪಕ್ಷಕ್ಕೆ ಇಷ್ಟು ಹೀನಾಯ ಸೋಲು ಅನುಭವಿಸುವ ಪರಿಸ್ಥಿತಿ ಬರುತ್ತಿರಲಿಲ್ಲವೇನೋ ಎಂದು ಅರೋಗ್ಯ ಸಚಿವ ಡಾ.ಕೆ. ಸುಧಾಕರ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ರಾಜರಾಜೇಶ್ವರಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಮುನಿರತ್ನ ಅವರಿಗೆ ಅಭಿನಂದನೆ ಸಲ್ಲಿಸಿದ ಸುಧಾಕರ್ ಅವರು ಮುನಿರತ್ನ ಅವರ ಜನಪರ ಕಾರ್ಯಗಳು ಆರ್ ಆರ್ ನಗರದ ಜನತೆಯ ಮನ ಗೆದ್ದಿದ್ದು ಹ್ಯಾಟ್ರಿಕ್ ಗೆಲುವು ನೀಡುವ ಮೂಲಕ ಮತ್ತೊಮ್ಮೆ ಆಶೀರ್ವಾದ ಮಾಡಿದ್ದಾರೆ ಎಂದರು
ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರದ ಜನಪರ ಕಾರ್ಯಗಳಿಗೆ ಬೆಂಬಲ ನೀಡಿದ ಜನತೆಗೆ ಮತ್ತು ಗೆಲುವಿಗೆ ಕಾರಣರಾದ ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ.
ಇದನ್ನೂ ಓದಿ:ಎರಡು ಮೂರು ದಿನದಲ್ಲಿ ಸಂಪುಟ ವಿಸ್ತರಣೆ: ಸಿಎಂ ಯಡಿಯೂರಪ್ಪ
ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರಿಗೆ ಅಭಿನಂದನೆಗಳು. ಈ ಅಭೂತಪೂರ್ವ ವಿಜಯ ಸಾಧಿಸಲು ಶ್ರಮಿಸಿದ ಪಕ್ಷದ ಎಲ್ಲಾ ನಾಯಕರಿಗೂ ಮತ್ತು ಕಾರ್ಯಕರ್ತರಿಗೂ ಅಭಿನಂದನೆಗಳು ಎಂದರು.