Advertisement

ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ : ನಿವೃತ್ತ ವೈದ್ಯರ ಬಳಕೆಗೆ ಸರ್ಕಾರದ ಇಂಗಿತ

11:31 PM Apr 28, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ವೈದ್ಯರು ಲಭ್ಯರಿರುವಂತೆ ಮಾಡಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ ವೈದ್ಯಕೀಯ ಸೇವೆಯಿಂದ ನಿವೃತ್ತರಾದವರು ಮತ್ತು ಯುವ ವೈದ್ಯರನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಸರ್ಕಾರದ ವತಿಯಿಂದಲೇ ಪ್ರತ್ಯೇಕ ವೆಬ್‌ಸೈಟ್‌ ಅನ್ನು ಸಿದ್ಧಪಡಿಸಲಾಗುತ್ತಿದೆ.

Advertisement

ಅದರಲ್ಲಿ ವೈದ್ಯರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ವಿವರಿಸಿದರು. ವೈದ್ಯರು ಸ್ವಯಂಪ್ರೇರಿತರಾಗಿ ಚಿಕಿತ್ಸೆ ನೀಡುವ ಕಾರ್ಯಕ್ಕೆ ಮುಂದಾಗಬೇಕು. ನಿವೃತ್ತ ವೈದ್ಯರ ಜತೆಗೆ ಯುವ ವೈದ್ಯರೂ ಕೂಡ ಮನೆಯಲ್ಲಿದ್ದುಕೊಂಡೇ ಆನ್‌ಲೈನ್‌ನಲ್ಲಿ ಸೋಂಕು ಪೀಡಿತರಿಗೆ ವೈದ್ಯಕೀಯ ಸಲಹೆ ನೀಡಲು ಅನುಕೂಲವಾಗುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು. ಇಂಥ ಕೆಲಸದಲ್ಲಿ ನಿರತರಾದವರಿಗೆ ರಾಜ್ಯ ಸರ್ಕಾರದ ವತಿಯಿಂದ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.

ಇದನ್ನೂ ಓದಿ :ಕನ್ನಡತಿ ಕೃತಿ ಕಾರಂತ್‌ಗೆ 2021ನೇ ಸಾಲಿನ ವೈಲ್ಡ್‌ ಇನ್ನೋವೇಟರ್‌ ಪ್ರಶಸ್ತಿ

ಇಂಥ ಕ್ರಮದಿಂದ ಸೋಂಕು ಪೀಡಿತರಿಗೆ ಆಸ್ಪತ್ರೆಗಳಿಗೆ ಭೇಟಿ ನೀಡದೆ ಸುಸೂತ್ರವಾಗಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸುವುದೇ ಸರ್ಕಾರದ ಉದ್ದೇಶ ಎಂದು ಡಾ.ಸುಧಾಕರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next