Advertisement
ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ತುರ್ತುಸಭೆ ನಡೆಸಿದ ಶಾಸಕರು, ಕೋವಿಡ್ ನಿಯಂತ್ರಿಸುವ ನೆಪದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು ಕೊರೋನಾ ಸೋಂಕಿತ ರೋಗಿಗಳಿಗೆ ಅವಧಿ ಮುಗಿದಿರುವ ಔಷಧಿಗಳನ್ನು ನೀಡುವಂತೆ ಅನುಮತಿ ನೀಡಿರುವುದು ಖಂಡನೀಯ ಎಂದರು.
Related Articles
Advertisement
ಅವಧಿ ಮುಗಿದಿರುವ ಯಾವುದೇ ಔಷಧಿ ಅಥವಾ ಇಂಜೆಕ್ಷನ್ ವಿಷಕ್ಕೆ ಸಮಾನ. ಅವುಗಳನ್ನು ರೋಗಿಗಳಿಗೆ ನೀಡುವುದಾದರೂ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಜತೆಗೆ ರಾಜ್ಯಪಾಲರು ಮತ್ತು ರಾಷ್ಟçಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ತಹಶೀಲ್ದಾರ್ ಕುಂಞ ಅಹಮ್ಮದ್, ತಾಪಂ ಇಒ ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್, ವೃತ್ತ ನಿರೀಕ್ಷಕ ಸುಧಾಕರ್, ಪುರಸಭೆ ಮುಖ್ಯಾಧಿಕಾರಿ ಮಹದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಗದೀಶ್, ಬೆಳ್ಳೂರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತರರಿದ್ದರು.