Advertisement

Darshan: ಅಡ್ವಾನ್ಸ್‌ ಬುಕ್ಕಿಂಗ್‌ನಲ್ಲಿ ‘ಕಾಟೇರ’ ಹವಾ: ಭರ್ಜರಿ ಗೆಲುವಿನ ನಿರೀಕ್ಷೆ

03:17 PM Dec 26, 2023 | Team Udayavani |

ನಟ ದರ್ಶನ್‌ ಅಭಿನಯದ “ಕಾಟೇರ’ ಸಿನಿಮಾದ ಬಿಡುಗಡೆಗೆ ಕೌಂಟ್‌ ಡೌನ್‌ ಶುರುವಾಗಿದೆ. ಇದೇ ಶುಕ್ರವಾರ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದ್ದು, ವರ್ಷದ ಕೊನೆಯ ಬಿಗ್‌ ಬಜೆಟ್‌ ಮತ್ತು ಬಿಗ್‌ ಸ್ಟಾರ್‌ ಸಿನಿಮಾ “ಕಾಟೇರ’ ವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

Advertisement

ಇನ್ನು ಗುರುವಾರ ಮಧ್ಯರಾತ್ರಿ 12 ಗಂಟೆಗೆ ಹಲವೆಡೆ “ಕಾಟೇರ’ ಸಿನಿಮಾದ ಮೊದಲ ಪ್ರದರ್ಶನ ಆರಂಭವಾಗಲಿದೆ. ಈಗಾಗಲೇ ರಾಜ್ಯಾದ್ಯಂತ ಆಯ್ದ ಚಿತ್ರಮಂದಿರಗಳಲ್ಲಿ “ಕಾಟೇರ’ನ ಅಡ್ವಾನ್ಸ್‌ ಬುಕ್ಕಿಂಗ್‌ ಶುರುವಾಗಿದ್ದು, ಹಲವು ಶೋಗಳು ಸೋಲ್ಡೌಟ್‌ ಆಗಿದೆ. ಬೆಂಗಳೂರಿನ ಕೆ. ಜಿ ರಸ್ತೆಯ ಅನುಪಮಾ ಚಿತ್ರಮಂದಿರದಲ್ಲಿ “ಕಾಟೇರ’ ಬಿಡುಗಡೆಯಾಗಲಿದ್ದು, ದರ್ಶನ್‌ ಅಭಿಮಾನಿಗಳು ಸಂಭ್ರಮಾಚರಣೆಗೆ ಸಿದ್ಧತೆ ನಡೆಸಿದ್ದಾರೆ. ಇನ್ನುಳಿದಂತೆ ಜೆ. ಪಿ ನಗರದ ಸಿದ್ದೇಶ್ವರ, ಮಾಗಡಿ ರಸ್ತೆಯ ಪ್ರಸನ್ನ ಚಿತ್ರಮಂದಿರಗಳಲ್ಲೂ “ಕಾಟೇರ’ನನ್ನು ಅದ್ಧೂರಿಯಾಗಿ ಬರ ಮಾಡಿಕೊಳ್ಳಲು ಫ್ಯಾನ್ಸ್‌ ತುದಿಗಾಲಿನಲ್ಲಿದ್ದಾರೆ.

ಈಗಾಗಲೇ ಬೆಳಗಿನ ಜಾವ 5 ಗಂಟೆ ಹಾಗೂ 10 ಗಂಟೆಯ ಶೋಗಳು ಕೆಲವೆಡೆ ಸೋಲ್ಡೌಟ್‌ ಆಗಿದೆ. ಇನ್ನು ಕೆಲವು ಚಿತ್ರಮಂದಿರಗಳಲ್ಲಿ ಕೆಲ ಶೋಗಳು ಫಾಸ್ಟ್‌ ಫಿಲ್ಲಿಂಗ್‌ ಆಗುತ್ತಿದೆ. ಕೆಲವು ಕಡೆಗಳಲ್ಲಿ ಮಧ್ಯರಾತ್ರಿ ಹಾಗೂ ಮುಂಜಾನೆಯ ಶೋಗಳ ಟಿಕೆಟ್‌ ದರ 1000 ರೂ. ಮುಟ್ಟಿದೆ.

“ಕಾಟೇರ’ ಸಿನಿಮಾದಲ್ಲಿ ದರ್ಶನ್‌ ಹಳ್ಳಿ ಹೈದನಾಗಿ ಕುಲುಮೆಯಲ್ಲಿ ಕೆಲಸ ಮಾಡುವ ವ್ಯಕ್ತಿಯಾಗಿ ಕಾಣಿಸಿ ಕೊಂಡಿದ್ದಾರೆ. ಹಿರಿಯ ನಟಿ ಮಾಲಾಶ್ರೀ ಪುತ್ರಿ ಆರಾಧನಾ ಈ ಸಿನಿಮಾದ ಮೂಲಕ ನಾಯಕಿಯಾಗಿ ಸ್ಯಾಂಡಲ್‌ವುಡ್‌ಗೆ ಪರಿಚಯವಾಗುತ್ತಿದ್ದಾರೆ. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದಲ್ಲಿ ಮೂಡಿಬಂದಿರುವ “ಕಾಟೇರ’ ಸಿನಿಮಾಕ್ಕೆ ತರುಣ್‌ ಸುಧೀರ್‌ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next