ಪುಂಜಾಲಕಟ್ಟೆ: ಕೇಂದ್ರ ಸರಕಾರ ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಕಬಡ್ಡಿ ಆಟಗಾರರು ಮತ್ತು ತೀರ್ಪುಗಾರರಿಗೂ ಭವಿಷ್ಯದಲ್ಲಿ ಪಿಂಚಣಿ ದೊರಕುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 34ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರೊ ಕಬಡ್ಡಿ ಪಂದ್ಯಾಟದ ಸಮಾರೋಪದಲ್ಲಿ ಸಾಧಕರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕ್ರೀಡೆ, ಸಾಮೂಹಿಕ ವಿವಾಹಗಳಂತಹ ಸಮಾಜಿಮುಖೀ ಕಾರ್ಯನಡೆಸುವ ಸ್ವಸ್ತಿಕ್ ಫ್ರೆಂಡ್ಸ್ ಅಭಿನಂದನೀಯ
ಎಂದು ಹೇಳಿದರು.
ಚಂದ್ರಶೇಖರ ಪಾಲೆತ್ತಾಡಿ (ಪತ್ರಿಕೋದ್ಯಮ), ಕರುಣಾಕರ ಶೆಟ್ಟಿ (ಸಮಾಜ ಸೇವೆ), ಬಾಲಕೃಷ್ಣ ರೈ ಸಾಲೆತ್ತೂರು, ಹೇಮಚಂದ್ರ ಬಬ್ಬುಕಟ್ಟೆ (ಕ್ರೀಡಾ ಕ್ಷೇತ್ರ) ಹಾಗೂ ನಾರಾಯಣ ಪೂಜಾರಿ ಡೆಚ್ಚಾರು (ಹಿರಿಯ ಕಬಡ್ಡಿ ಆಟಗಾರ) ಅವರಿಗೆ ಸಂಸದರು ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಿದರು. ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಭವ್ಯ ಭಾರತದ ನಿರ್ಮಾಣಕ್ಕೆ ಯುವ ಜನಾಂಗ ಕೈಜೋಡಿಸಬೇಕು ಎಂದರು.
ಮಾಜಿ ಸಚಿವ ನಾಗರಾಜ ಶೆಟ್ಟಿ, ಬಿಜೆಪಿ ಮುಖಂಡ ರಾಜೇಶ್ ನಾೖಕ್ ಉಳಿಪಾಡಿಗುತ್ತು, ಮುಂಬಯಿ ಉದ್ಯಮಿ ಸುಂದರರಾಜ್ ಹೆಗ್ಡೆ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಹಾಪ್‌ಕಾಮ್ಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಜನತಾ ಬಜಾರ್ ನಿರ್ದೇಶಕ ಪುರುಷೋತ್ತಮ ಶೆಟ್ಟಿ, ಬೆಳ್ತಂಗಡಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ರಂಜನ್ ಗೌಡ, ವಾಮದಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ವಾಮದಪದವು ಸಿ.ಎ. ಬ್ಯಾಂಕ್ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾ| ಘಟಕದ ಅಧ್ಯಕ್ಷ ರಮೇಶ್ ಶೆಟ್ಟಿ ಮಜಲೋಡಿ, ಉದ್ಯಮಿ ಹರೀಂದ್ರ ಪೈ, ಅಜಿತ್ ಪೈವಳಿಕೆ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲಾ ಪಿ., ಪದಾಧಿಕಾರಿಗಳಾದ ರಾಜೇಶ್ ಪಿ.ಜಯರಾಜ್ ಅತ್ತಾಜೆ,ರತ್ನಾಕರ ಪಿ.ಎಂ. ಉಪಸ್ಥಿತರಿದ್ದರು.
ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿದರು. ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಪ್ರಸ್ತಾವಿಸಿದರು. ಜಿಲ್ಲಾ ಕಬಡ್ಡಿ ತೀರ್ಪುಗಾರರ ಸಮಿತಿ ಸಂಚಾಲಕ ಫ್ರಾನ್ಸಿಸ್ ವಿ.ವಿ. ಕಾರ್ಯಕ್ರಮ ನಿರೂಪಿಸಿದರು.