ನ್ನಡ ಚಿತ್ರರಂಗದಲ್ಲಿ ಕುತೂಹಲ ಕೆರಳಿಸಿರುವ ಸ್ಟಾರ್ ಸಿನಿಮಾಗಳಲ್ಲಿ ಉಪೇಂದ್ರ ನಾಯಕರಾಗಿರುವ ಆರ್.ಚಂದ್ರು ನಿರ್ದೇಶನದ “ಕಬ್ಜ’ ಚಿತ್ರ ಒಂದು. ಬರೋಬ್ಬರಿ ಏಳು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಪ್ಯಾನ್ ಇಂಡಿಯಾ ಸಿನಿಮಾವಾಗಿ ” ಕಬ್ಜ ‘ ತಯಾರಾಗುತ್ತಿದೆ. ಈಗಾಗಲೇ ಚಿತ್ರದ ಫೋಟೋಶೂಟ್ ಸಿನಿಪ್ರೇಮಿಗಳ ನಿರೀಕ್ಷೆಯನ್ನು ಹೆಚ್ಚಿಸಿದೆ. ಕೋವಿಡ್ ಲಾಕ್‌ಡೌನ್‌ನಿಂದ ಸಿನಿಮಾ ಕೆಲಸಗಳು ಸ್ತಬ್ಧವಾಗಿದ್ದವು. ಈಗ ಆರಂಭವಾಗಿದ್ದು, “ಕಬj’ ತಂಡ ಕೂಡಾ ರೆಡಿಯಾಗಿದೆ. ಮೊದಲಹಂತವಾಗಿ ಅಭಿಮಾನಿಗಳಿಗೆ ಒಂದುಉಡುಗೊರೆ ಕೊಡಲು ಮುಂದಾಗಿದೆ.
ಅದೇನೆಂದು ನೀವು ಕೇಳಬಹುದು. ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಅದಕ್ಕೆ ಕಾರಣ ಉಪೇಂದ್ರ ಅವರ ಹುಟ್ಟುಹಬ್ಬ. ಸೆಪ್ಟೆಂಬರ್ 18 ಉಪೇಂದ್ರ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ನಿರ್ದೇಶಕಆರ್.ಚಂದ್ರು ಥೀಮ್ ಪೋಸ್ಟರ್ ಬಿಡುಗಡೆ ಮಾಡಲಿದ್ದಾರೆ. ಈ ಥೀಮ್ ಪೋಸ್ಟರ್ ಅನ್ನು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಮ್‌ಗೊàಪಾಲ್ ವರ್ಮಾ ಬಿಡುಗಡೆ ಮಾಡಲಿದ್ದಾರೆ.
ಸೆಪ್ಟೆಂಬರ್ 17 ರಂದು ಸಂಜೆ 5 ಗಂಟೆಗೆ ರಾಮ್ ಗೋಪಾಲ್ ವರ್ಮಾ ಚಿತ್ರದ ಥೀಮ್ ಪೋಸ್ಟರ್ ಬಿಡುಗಡೆ ಮಾಡಲಿದ್ದು, ಏಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ಸಹಜವಾಗಿಯೇ ಈ ಚಿತ್ರದ ಬಗ್ಗೆ ಕುತೂಹಲವಿದ್ದು,ಥೀಮ್ ಪೋಸ್ಟರ್ ಹೇಗಿರಲಿದೆ ಎಂಬ ಕುತೂಹಲ ಕೂಡಾ ಅಭಿಮಾನಿಗಳಲ್ಲಿದೆ. ಚಿತ್ರದಲ್ಲಿ ಉಪೇಂದ್ರ 80ರ ದಶಕದ ಡಾನ್ ಆಗಿ ಕಾಣಿಸಿಕೊಳ್ಳುತ್ತಿದ್ದು, ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲೇ ಮೂಡಿಬರಲಿದೆ. ಬಹುತೇಕ ಸಿನಿಮಾ ಸೆಟ್‌ನಲ್ಲೇ ನಡೆಯುವ ಸಾಧ್ಯತೆ ಇದ್ದು, ಅದ್ಧೂರಿ ಬಜೆಟ್‌ನ ಸಿನಿಮಾ ಎಂದು ಈಗಾಗಲೇ ಗಾಂಧಿನಗರದಲ್ಲಿ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ “ಐ ಲವ್ ಯು’ ಚಿತ್ರವನ್ನು ಕನ್ನಡ ಹಾಗೂ ತೆಲುಗಿನಲ್ಲಷ್ಟೇ ಬಿಡುಗಡೆ ಮಾಡಿದ್ದ ಚಂದ್ರು, ಈ ಬಾರಿ ಬರೋಬ್ಬರಿ ಏಳು ಭಾಷೆಗಳಲ್ಲಿ ತಮ್ಮ ಹೊಸ ಸಿನಿಮಾವನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ, ಮರಾಠಿ ಭಾಷೆಗಳಲ್ಲಿ ಈ ಚಿತ್ರವನ್ನು ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈ ಮೂಲಕ ಚಂದ್ರು ಪ್ಯಾನ್ ಇಂಡಿಯಾದತ್ತ ಮುಖ ಮಾಡಿದ್ದಾರೆ.“ಕಬ್ಜ’ ಮೇಲೆ ನಿರೀಕ್ಷೆ ಇದ್ದು, ಈ ಚಿತ್ರದ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಚಂದ್ರು ಅವರದ್ದೇ. ಸದ್ಯ ಸೆಟ್‌ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ.