ಮಣಿಪಾಲ: ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ನಟನೆಯ “ಕಬ್ಜ” ಸಿನಿಮಾದ ಹಿಂದಿ ಅವತರಣಿಕೆಯ ಟೀಸರ್ ಬಿಡುಗಡೆಯಾಗಿದ್ದು, ಒಂದೇ ದಿನದಲ್ಲಿ ಟೀಸರ್ ಯೂಟ್ಯೂಬ್ ನಲ್ಲಿ ಐದು ಲಕ್ಷ ಮಂದಿ ವೀಕ್ಷಿಸಿದ್ದಾರೆ.
ಇದನ್ನೂ ಓದಿ:ಆಸೀಸ್ ವಿರುದ್ಧ ಟಿ20 ಸರಣಿ: ತಂಡದಿಂದ ಹೊರಗುಳಿದ ಇಬ್ಬರು ಪ್ರಮುಖ ಆಲ್ ರೌಂಡರ್ ಗಳು
ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾ ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಯಲ್ಲಿ 2023ರಲ್ಲಿ ದೇಶಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ.
ವಿತರಣೆ ಹಕ್ಕು :
ಹಿಂದಿಯಲ್ಲಿ ಸಾಕಷ್ಟು ದೊಡ್ಡ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಆನಂದ್ ಪಂಡಿತ್ ಅವರು ಕಬ್ಜ ಸಿನಿಮಾದ ಹಿಂದಿ ವಿತರಣೆ ಹಕ್ಕುಗಳನ್ನು ಖರೀದಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚಿತ್ರ ನಿರ್ಮಾಣ ಮಾಡಿರುವ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಕಬ್ಜ ಹಿಂದಿ ವಿತರಣೆ ಹಕ್ಕುಗಳನ್ನು ನೂರು ಕೋಟಿ ರೂಪಾಯಿಗೆ ಖರೀದಿಸಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ತಿಳಿದುಬರಬೇಕಾಗಿದೆ.
ಕಬ್ಜ ಸಿನಿಮಾದಲ್ಲಿ ಉಪೇಂದ್ರ ಅವರಿಗೆ ನಾಯಕಿಯಾಗಿ ಶ್ರೀಯಾ ಶರಣ್ ಜತೆಯಾಗಿದ್ದು, ಕಿಚ್ಚ ಸುದೀಪ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡ್ಯಾನಿಶ್ ಅಖ್ತರ್ ಸೈಫಿ, ನವಾಬ್ ಶಾ, ಕಬೀರ್ ಸಿಂಗ್ ದುಹಾನಿ, ಪೊಸಾನಿ ಮುರಳಿ ಶರ್ಮಾ ಸೇರಿದಂತೆ ಇನ್ನಿತರರು ತಾರಾಬಳಗದಲ್ಲಿದ್ದಾರೆ.