Advertisement
ಅವರು ರವಿವಾರ ಬಾರ್ಕೂರು ಕಚ್ಚಾರು ಮಾಲ್ತಿ ದೇವಿ ಹಾಗೂ ಬಬ್ಬುಸ್ವಾಮಿ ಮೂಲಕ್ಷೇತ್ರದಲ್ಲಿ ಜಾತ್ರೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣಕ್ಕೆ ಎಲ್ಲದಕ್ಕಿಂತ ಹೆಚ್ಚಿನ ಶಕ್ತಿ ಇದೆ. ಆದ್ದರಿಂದ ನಿಮ್ಮ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣವನ್ನು ನೀಡಿ. ನಿಮ್ಮ ಎಲ್ಲ ಅಭಿವೃದ್ಧಿ ಕಾರ್ಯಗಳಲ್ಲೂ ಕೈ ಜೋಡಿಸುತ್ತೇನೆ ಎಂದರು.
ನನ್ನ ಶಾಸಕತ್ವದ ಅವಧಿಯಲ್ಲಿ ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಲವು ರೀತಿಯಲ್ಲಿ ಸಹಕಾರ ನೀಡಿದ್ದೇನೆ. ವಸತಿ ನಿಲಯ, ಶಿಕ್ಷಣ ಸಂಸ್ಥೆ, ಕ್ಷೇತ್ರದ ಅಭಿವೃದ್ಧಿ ಹೀಗೆ ಹಲವಾರು ಕಾರ್ಯಗಳು ಇಲ್ಲಿ ನಡೆಯಬೇಕಿದೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಪಿ. ಬಾಬು ಮಲ್ಲಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಧಕರಿಗೆ ಸಮ್ಮಾನ
ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರಾದ ನಿವೃತ್ತ ಸೈನಿಕ ಬಿ. ಸಂಜೀವ ರಾವ್, ರವಿ ಎಸ್. ಕಟಪಾಡಿ, ನಿಖೀತ, ಸಂಚಲನ ತಂಡ ಹಾಗೂ ಮುರುಳಿ ಕುಮಾರ್ ಅವರನ್ನು ಸಮ್ಮಾನಿಸಲಾಯಿತು. ಉಡುಪಿ ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಂಗಳೂರು ಮನಪಾ ಉಪ ಮೇಯರ್ ರಜನೀಶ್ ಅವರನ್ನು ಗೌರವಿಸಲಾಯಿತು ಹಾಗೂ ಸಮಾಜದ ಶೈಕ್ಷಣಿಕ ಸಾಧಕರನ್ನು ಸಮ್ಮಾನಿಸಲಾಯಿತು.
Related Articles
Advertisement
ಆಡಳಿತ ಮಂಡಳಿಯ ಕಾರ್ಯದರ್ಶಿ ಗೋಕುಲ್‌ದಾಸ್ ಸ್ವಾಗತಿಸಿ, ಉಪನ್ಯಾಸಕ ಪ್ರೇಮಾನಂದ ಕಾರ್ಯಕ್ರಮ ನಿರೂಪಿಸಿದರು.