Advertisement
ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರತಿ ವರ್ಷ ಮಾ. 3ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ 2008-09ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾÃಣ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲ ಜಿÇÉೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಎನ್‌ಪಿಪಿಸಿಡಿ ಕಾರ್ಯಕ್ರಮ ವಿಭಾಗದಿಂದ 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲ ಇ.ಎನ್.ಟಿ. ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದರು.