Advertisement

ಕಾಕ್ಲಿಯಾರ್‌ ಇಂಪ್ಲಾಂಟ್‌: ಈ ವರ್ಷ 115 ಶಸ್ತ್ರಚಿಕಿತ್ಸೆ

12:02 AM Mar 03, 2023 | Team Udayavani |

ಬೆಂಗಳೂರು: ರಾಜ್ಯ ಸರಕಾರದ ಕಾಕ್ಲಿಯಾರ್‌ ಇಂಪ್ಲಾಂಟ್‌ ಯೋಜನೆಯಡಿ ಈ ವರ್ಷ 115 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇಂಥ ಕ್ರಮಗಳ ಮೂಲಕ ಕಿವಿಯ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದ್ದಾರೆ.

Advertisement

ಈ ಕುರಿತು ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಪ್ರತಿ ವರ್ಷ ಮಾ. 3ರಂದು ವಿಶ್ವ ಶ್ರವಣ ದಿನ ಆಚರಿಸುತ್ತಿದ್ದು, ಈ ವರ್ಷ “ಕಿವಿ ಮತ್ತು ಶ್ರವಣ ಆರೈಕೆ ಎಲ್ಲರಿಗಾಗಿ, ಬನ್ನಿ ವಾಸ್ತವವಾಗಿಸೋಣ’ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ಹೇಳಿದರು.

ಎಲ್ಲ ಆರೋಗ್ಯ ಕಾರ್ಯಕರ್ತೆಯರಿಗೆ, ಕಿವಿಯ ಆರೈಕೆ, ಪ್ರಥಮ ಚಿಕಿತ್ಸೆ ಹಾಗೂ ತಪಾಸಣೆ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಈ ಮೂಲಕ ಕಿವಿಯ ಆರೈಕೆ ಹಾಗೂ ಶ್ರವಣ ಆರೈಕೆಯನ್ನು ಪ್ರಾಥಮಿಕ ಆರೋಗ್ಯ ಸೇವೆಗಳಲ್ಲಿ ವಿಲೀನಗೊಳಿಸಲಾಗುತ್ತಿದೆ. 6 ವರ್ಷದೊಳಗಿನ ಮಕ್ಕಳಲ್ಲಿನ ಗಂಭೀರ ಸ್ವರೂಪದ ಶ್ರವಣ ದೋಷದ ನಿವಾರಣೆಗೆ ಕಾಕ್ಲಿಯರ್‌ ಇಂಪ್ಲಾಂಟ್‌ ಯೋಜನೆ ತರಲಾಗಿದೆ ಎಂದರು.

2,00,305 ಮಂದಿಗೆ ಶ್ರವಣ ದೋಷ
ರಾಜ್ಯದಲ್ಲಿ 2008-09ರಲ್ಲಿ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿವಾÃಣ ಕಾರ್ಯಕ್ರಮ ಜಾರಿಯಾಗಿದ್ದು, ಉಪಕರಣ ಮತ್ತು ಶಸ್ತ್ರಚಿಕಿತ್ಸೆಗಾಗಿ ಎಲ್ಲ ಜಿÇÉೆಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಕಳೆದ 5 ವರ್ಷಗಳಲ್ಲಿ ಎನ್‌ಪಿಪಿಸಿಡಿ ಕಾರ್ಯಕ್ರಮ ವಿಭಾಗದಿಂದ 2,00,305 ಶ್ರವಣ ದೋಷವುಳ್ಳವರನ್ನು ಹಾಗೂ 35,418 ಗಂಭೀರ ಶ್ರವಣ ದೋಷವುಳ್ಳವರನ್ನು ಗುರುತಿಸಲಾಗಿದೆ. 5 ವರ್ಷದೊಳಗಿನ 2,381 ಮಕ್ಕಳಲ್ಲಿ ಗಂಭೀರ ಶ್ರವಣ ದೋಷವಿದೆ. ರಾಜ್ಯದ ಎಲ್ಲ ಇ.ಎನ್‌.ಟಿ. ತಜ್ಞರ ಸಹಾಯದಿಂದ ಕಿವಿಯ ಸಮಸ್ಯೆಗಳಿಗೆ 10,213 ಶಸ್ತ್ರಚಿಕಿತ್ಸೆ ಮಾಡಲಾಗಿದೆ. 11,857 ಫ‌ಲಾನುಭವಿಗಳಿಗೆ ಶ್ರವಣ ಸಾಧನ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next