Advertisement

Kadaba ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ

11:57 PM Jan 05, 2024 | Team Udayavani |

ಕಡಬ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಅಧಿಕಾರಿಗಳು ಎರಡು ನಾಡ ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ ಕಡಬ ತಾಲೂಕಿನ ಐತ್ತೂರು ಗ್ರಾಮದ ಬೀದಿಗುಡ್ಡೆ ಎಂಬಲ್ಲಿ ನಡೆದಿದೆ.

Advertisement

ಐತೂರು ಗ್ರಾ. ಪಂ. ವ್ಯಾಪ್ತಿಯ ಬೀದಿಗುಡ್ಡೆ ಸಮೀಪ ಕುಮಾರಧಾರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸ್‌ ಇಲಾಖೆಯ ಅಧಿಕಾರಿಗಳು ನಾಡದೋಣಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next