Advertisement
ಚಿಕಿತ್ಸೆಯ ನಿರ್ಲಕ್ಷ್ಯದ ಪರಿಣಾಮ ಗಾಯ ಉಲ್ಬಣಗೊಂಡು ಗಾಯಾಳು ಕಂಗಾಲಾಗಿದ್ದು, ಇದೀಗ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯ ಮೂಲಕ ಗಾಯದೊಳಗಿದ್ದ ಕಲ್ಲುಗಳನ್ನು ಹೊರತೆಗೆಯಲಾಗಿದೆ.
Related Articles
Advertisement
ಗಾಯ ಉಲ್ಬಣ
ಆದಾದ ವಾರದ ಬಳಿಕವೂ ಗಾಯ ಗುಣವಾಗದೆ ಉಲ್ಬಣಗೊಂಡಿತ್ತು. ಆ ಬಗ್ಗೆ ಪುರುಷೋತ್ತಮ ಅವರು ಮೇ.4ರಂದು ಕಡಬದ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಗಾಯದ ಎಕ್ಸರೆ ತೆಗೆಸಿ ಅಲ್ಲಿಯೇ ಕ್ಲಿನಿಕ್ ನಲ್ಲಿದ್ದ ತಜ್ಞ ವೈದ್ಯರಿಗೆ ತೋರಿಸಿದ್ದರು. ವೈದ್ಯರು ಎಕ್ಸರೇ ಪರಿಶೀಲಿಸಿ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು. ಆ ಹಿನ್ನಲೆಯಲ್ಲಿ ಪುರುಷೋತ್ತಮ ಅವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಬರೋಬ್ಬರಿ 14 ಕಲ್ಲು!
ಆಸ್ಪತ್ರೆಯಲ್ಲಿ ಮೇ.4ರಂದು ರಾತ್ರಿ ಸರ್ಜರಿ ನಡೆಸಲಾಗಿದ್ದು ಈ ವೇಳೆ ವೈದ್ಯರಿಗೆ ಬರೋಬ್ಬರಿ 14 ಕಲ್ಲುಗಳು ದೊರೆತಿದೆ. ಗಾಯವಾದ ಆ ದಿನವೇ ಸ್ಟಿಚ್ ಮಾಡುವಾಗ ಸರಿಯಾಗಿ ಶುಚಿಗೊಳಿಸಿ ಸ್ಟಿಚ್ ಮಾಡುತ್ತಿದ್ದರೆ ಗಾಯ ಉಲ್ಬಣಗೊಳ್ಳುವ ಪ್ರಮೇಯ ಉಂಟಾಗುತ್ತಿರಲಿಲ್ಲ ಎಂದು ಅಲ್ಲಿನ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಕಡಬ ಆಸ್ಪತ್ರೆಯಲ್ಲಿನ ನಿರ್ಲಕ್ಷಕ್ಕೆ ಕೊನೆ ಇಲ್ಲವೆ?
ಕಡಬ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರು, ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದುರಾಗಿದೆ. ಆರೋಗ್ಯ ಇಲಾಖೆಯ ಉನ್ನತಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ.