Advertisement
ಶುಕ್ರವಾರ ನದಿಯ ಒಂದು ಬದಿಯ ನೀರಿನಲ್ಲಿ ಅಂದಾಜು 1.5 – 2 ವರ್ಷದ ಮೊಸಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಅದು ಗುರುವಾರ ಹಗಲು ಆಥವಾ ರಾತ್ರಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
Related Articles
Advertisement
ಕೆಲವರು ಮೀನು ಹಿಡಿಯಲು ರಾಸಾಯನಿಕ ಮಿಶ್ರಿತ ದ್ರಾವಣವನ್ನು ನೀರಿಗೆ ಹಾಕುತ್ತಿರುವ ಆರೋಪವೂ ಇದ್ದು ಅದರಿಂದ ಅಸುನೀಗಿರಬಹುದು ಎಂಬ ಮಾತುಗಳೂ ಕೇಳಿಬರುತ್ತಿವೆ. ಸಮೀಪದಲ್ಲೇ ನಾಕೂರು ಗಯವಿದ್ದು ಅಲ್ಲಿ ಮಹಷಿರ್ ಜಾತಿಯ ದೇವರ ಮೀನುಗಳ ಸಮೂಹವೇ ಇದೆ. ಅವುಗಳ ರಕ್ಷಣೆಗೆ ಅರಣ್ಯ ಇಲಾಖೆ ಮುಂದಾಗಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಿಖರ ಕಾರಣ ಇಲ್ಲ
ಮೊಸಳೆಯ ಮೃತದೇಹ ಪತ್ತೆಯಾದಲ್ಲಿ ಮೀನುಗಳು ಕೂಡ ಇದ್ದು ಅವುಗಳಿಗೆ ಏನೂ ಆಗಿಲ್ಲ. ಅಲ್ಲದೆ ಮೃತದೇಹ ಸಿಕ್ಕಿರುವ ಸ್ಥಳದಲ್ಲಿ ನೀರು ಹರಿಯುತ್ತಿದೆ. ಇನ್ನೊಂದು ಮೊಸಳೆಯ ಜತೆಗಿನ ಕಾಳಗದಲ್ಲಿ ಸಾವನ್ನಪ್ಪುವ ಸಾಧ್ಯತೆ ಇದ್ದರೂ ದೇಹದಲ್ಲಿ ಗಾಯ ಕಂಡುಬಂದಿಲ್ಲ. ಮೊಸಳೆಯ ಮರಣೋತ್ತರ ಪರೀಕ್ಷೆಯನ್ನು ವೈದ್ಯರು ನಡೆಸಿ ವರದಿ ನೀಡಲಿದ್ದು, ಬಳಿಕವೇ ಸಾವಿಗೆ ಕಾರಣ ತಿಳಿದುಬರಲಿದೆ ಎಂದು ಪಂಜ ವಲಯ ಅರಣ್ಯಾಧಿಕಾರಿ ಗಿರೀಶ್ ತಿಳಿಸಿದ್ದಾರೆ.