Advertisement
ಅಪಾಯ ಸನ್ನಿವೇಶ ಅರಿವಿತ್ತು!ಕಾಲೇಜಿನ ಶಿಥಿಲ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲಿ ಕಟ್ಟಡ ಕುಸಿದು ಬಿದ್ದು ವಿದ್ಯಾರ್ಥಿಗಳಿಗೆ ಅಪಾಯ ಸಂಭವಿಸಬಹುದಾದ ಸಾಧ್ಯತೆ ಗಳಿರುವ ಕುರಿ ತು ಮಾಧ್ಯಮಗಳು ಈ ಹಿಂದೆಯೇ ಸಚಿತ್ರ ವರದಿಗಳನ್ನು ಪ್ರಕಟಿಸಿ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಪ್ರಯತ್ನ ನಡೆಸಿದ್ದವು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಹಾಗೂ ಜಿ.ಪಂ. ಎಂಜಿನಿಯರ್ ಭರತ್ ಅವರು ಕಟ್ಟಡದ ಪರಿಶೀಲನೆಯನ್ನೂ ನಡೆಸಿದ್ದರು.
ಕಡಬ ಸರಕಾರಿ ಪ.ಪೂ. ಕಾಲೇಜಿನ ಹಳೆಯ ಕಟ್ಟಡದ ಗೋಡೆ ಬಿರುಕುಬಿಟ್ಟ ಕಾರಣದಿಂದ ಸ್ಥಳ ಪರಿಶೀಲನೆ ನಡೆಸಿ ಮುಂಜಾಗರೂಕತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಬೇರೆಡೆ ಸ್ಥಳಾಂತರಿಸುವಂತೆ ಸೂಚಿಸಲಾಗಿತ್ತು. ಕಟ್ಟಡ ಕುಸಿಯುವ ಭೀತಿ ಇದ್ದುದರಿಂದ ಕಟ್ಟಡವನ್ನು ನೆಲಸಮಗೊಳಿಸಿ ಸಾಮಗ್ರಿಗಳನ್ನು ಹರಾಜು ಮಾಡಲು 50 ಸಾವಿರ ರೂ.ಗಳ ಅಂದಾಜು ಪಟ್ಟಿ ತಯಾರಿಸಿ ನೀಡಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಮುಂದಿನ ಕ್ರಮ ಕೈಗೊಳ್ಳಬೇಕಿದೆ.
- ಭರತ್,
ಜಿ.ಪಂ. ಎಂಜಿನಿಯರ್