Advertisement

Kadaba: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತ; ಯುವಕ ಸಾವು

12:59 PM Nov 02, 2024 | Team Udayavani |

ಕಡಬ: ಅನಾರೋಗ್ಯದ ಹಿನ್ನೆಲೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನ.2ರ ಶನಿವಾರ ನಡೆದಿದೆ.

Advertisement

ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ (29) ಮೃತಪಟ್ಟವರು.

ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಮೃತ ಜೈಸನ್ ತಂದೆ, ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next