Advertisement

Kadaba: ಶಾಲಾ ಕೊಠಡಿಯ ಗೋಡೆ, ಮೇಲ್ಛಾವಣಿ ಕುಸಿತ; ತಪ್ಪಿದ ಭಾರಿ ಅನಾಹುತ

04:17 PM Aug 27, 2024 | Team Udayavani |

ಕಡಬ: ಶಾಲಾ ಕೊಠಡಿಯ ಗೋಡೆ ಹಾಗೂ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಆ.27ರ ಮಂಗಳವಾರ  ಮಧ್ಯಾಹ್ನ ಕುಂತೂರಿನಲ್ಲಿ ನಡೆದಿದೆ.

Advertisement

ಕುಂತೂರು‌ ಸರಕಾರಿ ಶಾಲೆಯ ಕೊಠಡಿಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ.‌ ನಷ್ಟ ಸಂಭವಿಸಿದೆ. ಕಟ್ಟಡದ ಬಳಿ ಜೆಸಿಬಿಯಲ್ಲಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದ್ದು, ಆದ್ದರಿಂದಾಗಿ ಮೊದಲೇ ಶಿಥಿಲಗೊಂಡಿದ್ದ ಕಟ್ಟಡ ಕುಸಿದು ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆ ನಡೆಯುವ ವೇಳೆ ವಿದ್ಯಾರ್ಥಿಗಳು ಆಟದ ಮೈದಾನದಲ್ಲಿ ಇದ್ದುದರಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Advertisement

Advertisement

Udayavani is now on Telegram. Click here to join our channel and stay updated with the latest news.

Next