Advertisement

ಕಡಬಗೆರೆ ಶ್ರೀನಿವಾಸ್‌ ಡಿಸ್ಚಾರ್ಜ್

12:07 PM Feb 18, 2017 | Team Udayavani |

ಬೆಂಗಳೂರು: ಶೂಟೌಟ್‌ನಿಂದ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್‌ ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ತೆರಳಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶ್ರೀನಿವಾಸ್‌ ಹೆಬ್ಟಾಳ ಬಳಿ ಇರುವ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಸಂಜೆ ಆಸ್ಪತ್ರೆಯ ಆಂಬುಲೆನ್ಸ್‌ ನಲ್ಲಿ ಬಸವೇಶ್ವರ ನಗರದ ತಮ್ಮ ನಿವಾಸಕ್ಕೆ ತೆರಳಿದ್ದಾರೆ.
 
ಫೆ.3 ರಂದು ಪರಿಚಯಸ್ಥರೊಬ್ಬರ ಮನೆಯ ಗೃಹ ಪ್ರವೇಶಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಶ್ರೀನಿವಾಸ್‌ ಕಾರು ಯಲಹಂಕದ ಕೋಗಿಲು ಕ್ರಾಸ್‌ ಸ್ನಿಗಲ್‌ ಬಳಿ ನಿಂತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಶ್ರೀನಿವಾಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಮೂರು ಗುಂಡುಗಳು ಶ್ರೀನಿವಾಸ್‌ ದೇಹ ಹೊಕ್ಕಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. 

Advertisement

ನನ್ನ ವಿರುದ್ಧ ಸುಳ್ಳು ಆರೋಪ:  ಶ್ರೀನಿವಾಸ್‌ ಆರೋಪಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಎಸ್‌.ಆರ್‌.ವಿಶ್ವನಾಥ್‌ ನನ್ನ ವಿರುದ್ಧ ಶ್ರೀನಿವಾಸ್‌ ಸುಳ್ಳು ಆರೋಪ ಮಾಡುತ್ತಿದ್ದಾರೆ. ರಾಜಕೀಯ ಪಿತೂರಿಯಿಂದ ಪ್ರಕರಣದಲ್ಲಿ ನನ್ನ ಹೆಸರನ್ನು ಎಳೆದು ತರಲಾಗಿದೆ. ಇದರ ಪ್ರಭಾವಿ ರಾಜಕಾರಣಿಯೊಬ್ಬರು ಇದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಶ್ರೀನಿವಾಸ್‌ ಬಿಜೆಪಿಯಲ್ಲಿದ್ದಾಗ ನನ್ನೊಂದಿಗೆ ಸಂಪರ್ಕದಲ್ಲಿದ್ದರು. ಪಕ್ಷ ತೊರೆದ ಬಳಿಕ ಅವರೊಂದಿಗೆ ನಾನು ಸಂಪರ್ಕ ಹೊಂದಿಲ್ಲ ಎಂದು ತಿಳಿಸಿದ್ದಾರೆ.

ಶೂಟೌಟ್‌ ಪ್ರಕರಣದ ತನಿಖೆ ನಡೆಯುತ್ತಿದ್ದು, ಶ್ರೀನಿವಾಸ್‌ ಆರೋಪಿಸಿರುವ ಶಾಸಕರಿಗೆ ನೋಟಿಸ್‌ ನೀಡುವ ಬಗ್ಗೆ ಈಗಲೇ ಏನನ್ನೂ ಹೇಳಲು  ಸಾಧ್ಯವಿಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ. 
-ಪ್ರವೀಣ್‌ ಸೂದ್‌, ನಗರ ಪೊಲೀಸ್‌ ಆಯುಕ್ತ

Advertisement

Udayavani is now on Telegram. Click here to join our channel and stay updated with the latest news.

Next