Advertisement

ಟ್ರೇಲರ್‌ನಲ್ಲಿ ಕಂಡ ಭಾರ್ಗವ

03:08 PM Feb 15, 2023 | Team Udayavani |

ವಿಭಿನ್ನ ಶೀರ್ಷಿಕೆ, ಹಾಡುಗಳು ಮೂಲಕ ಈಗಾಗಲೇ ಗಮನ ಸೆಳೆದಿರುವ “ಕಡಲ ತೀರದ ಭಾರ್ಗವ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಮಾಜಿ ಉಪ ಮಹಾಪೌರರಾದ ಮೋಹನ್‌ ರಾಜು ಹಾಗೂ ಚಿತ್ರತಂಡ ಟ್ರೇಲರ್‌ ಬಿಡುಗಡೆ ಮಾಡಿ ಶುಭ ಕೋರಿದರು.

Advertisement

ಚಿತ್ರ ಮಾರ್ಚ್‌ 3ರಂದು ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಕಾರ್ಯಕ್ರಮದಲ್ಲಿ ಚಿತ್ರದ ಮೊದಲ ಟಿಕೆಟ್‌ ಹರಾಜಿನ ಮೂಲಕ ಮಾರಾಟ ಮಾಡಲಾಯಿತು. ಅತಿಥಿಯಾಗಿ ಆಗಮಿಸಿದ್ದ ಮೋಹನ್‌ ರಾಜು ಅವರು 2 ಲಕ್ಷ ರೂಪಾಯಿ ನೀಡಿ ಈ ಚಿತ್ರದ ಮೊದಲ ಟಿಕೆಟ್‌ ಪಡೆದುಕೊಂಡರು.

ಭಾರೀ ಬೆಲೆಗೆ ಟಿಕೆಟ್‌ ಮಾರಾಟವಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿರುವ ನಿರ್ಮಾಪಕರಾದ ಪಟೇಲ್‌ ವರುಣ್‌ ರಾಜು ಹಾಗೂ ಭರತ್‌ ಗೌಡ ಮೊದಲ ಟಿಕೆಟ್‌ ಮಾರಾಟದಿಂದ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಾಯಕ ಕಂ ನಿರ್ಮಾಪಕ ಪಟೇಲ್‌ ವರುಣ್‌ ರಾಜು, “ಚಿತ್ರದಲ್ಲಿ ಕಡಲ ತೀರದಲ್ಲಿ ವಾಸಿಸುವ ಭಾರ್ಗವನಾಗಿ ನಾನು ಅಭಿನಯಿಸಿದ್ದೇನೆ. ಚಿತ್ರ ಚೆನ್ನಾಗಿ ಬಂದಿದೆ’ ಎಂದರು.

“ನಾನು ಭರತ್‌ ಎಂಬ ಪಾತ್ರದಲ್ಲೇ ಕಾಣಿಸಿಕೊಂಡಿದ್ದೇನೆ. ಚಿತ್ರದ ಹಾಡುಗಳು ಹಾಗೂ ಟ್ರೇಲರ್‌ಗೆ ಸಿಗುತ್ತಿರುವ ಪ್ರತಿಕ್ರಿಯೆಗೆ ಮನತುಂಬಿ ಬಂದಿದೆ’ ಎನ್ನುವುದು ನಾಯಕ ಭರತ್‌ ಗೌಡ ಮಾತು. ಚಿತ್ರದ ಒಂದು ಸನ್ನಿವೇಶದ ಮೂಲಕ ಮಾತು ಪ್ರಾರಂಭಿಸಿದ ನಿರ್ದೇಶಕ ಪನ್ನಗ ಸೋಮಶೇಖರ್‌, “ಇದು ಹಿರಿಯ ಸಾಹಿತಿ ಶಿವರಾಮ ಕಾರಂತರ ಜೀವನಾಧಾರಿತ ಚಿತ್ರವಲ್ಲ. ಕಡಲ ತೀರದಲ್ಲಿ ವಾಸಿಸುವ ನಮ್ಮ ನಾಯಕನ ಹೆಸರು ಭಾರ್ಗವ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next