Advertisement

ಮೂಡಬಿದ್ರೆಯ ಕಡಂದಲೆಯಲ್ಲಿಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಲ್ಲಿ ಕೋವಿಡ್ ಸೋಂಕು ದೃಢ

07:41 PM May 22, 2020 | keerthan |

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದೆ.

Advertisement

ಮೂಡಬಿದಿರೆ ತಾಲೂಕಿನ ಕಡಂದಲೆಯಲ್ಲಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಬುಧವಾರವಷ್ಟೇ ಮುಂಬೈನಿಂದ ಸಹೋದರರ ಜೊತೆಗೆ ಊರಿಗೆ ಆಗಮಿಸಿದ್ದ 55 ವರ್ಷದ ಆ ವ್ಯಕ್ತಿಯನ್ನು ಕಡಂದಲೆಯ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಆದರೆ, ಇವರು ಶಾಲೆಯ ಜಗುಲಿಯ ಪಕ್ಕಾಸಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಗುರುವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿತ್ತು.

ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿತ್ತು. ಈ ವರದಿಯು ಶುಕ್ರವಾರದಂದು ಜಿಲ್ಲಾಡಳಿತದ ಕೈ ಸೇರಿದ್ದು, ವರದಿಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ಇದ್ದಿದ್ದು ದೃಢಪಟ್ಟಿತ್ತು.

Advertisement

ಮೃತರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆಂದು ಕಳುಹಿಸಲಾಗಿತ್ತು. ಈ ವರದಿಯು ಶುಕ್ರವಾರದಂದು ಜಿಲ್ಲಾಡಳಿತದ ಕೈ ಸೇರಿದ್ದು, ವರದಿಯಲ್ಲಿ ಮೃತ ವ್ಯಕ್ತಿಗೆ ಕೋವಿಡ್ ಸೋಂಕು ಇದ್ದಿದ್ದು ದೃಢಪಟ್ಟಿತ್ತು.

ಆತ್ಮಹತ್ಯೆ ಮಾಡಿಕೊಂಡಿರುವ ಈ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಅವರ ಕುಟುಂಬದ ಸಮ್ಮತಿಯೊಂದಿಗೆ ಕೋವಿಡ್ ನಿಯಮಾವಳಿಗೆ ಅನುಗುಣವಾಗಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿರುವ ಬೋಳೂರು ವಿದ್ಯುತ್ ಚಿತಾಗಾರದಲ್ಲಿ ವೈದ್ಯಕೀಯ ನಿಗಾ ಸಹಿತ ನಡೆಸಲಾಗುವುದು ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

ಮೇ 22ರ ಶುಕ್ರವಾರದವರೆಗೆ ಜಿಲ್ಲೆಯಲ್ಲಿ 41,849 ಜನರನ್ನು ತಪಾಸಣೆಗೊಳಪಡಿಸಲಾಗಿದೆ. ಇಲ್ಲಿಯವರೆಗೆ 5671 ಕೋವಿಡ್ ಶಂಕಿತರ ಮಾದರಿಗಳನ್ನು ಪ್ರಯೋಗಾಲಯದಲ್ಲಿ ತಪಾಸಣೆಗೊಳಪಡಿಸಿದ್ದು, ಇವುಗಳಲ್ಲಿ 5609 ವರದಿಗಳು ನೆಗೆಟಿವ್ ಬಂದಿದೆ ಹಾಗೂ 63 ಪ್ರಕರಣಗಳು ಪಾಸಿಟಿವ್ ಆಗಿವೆ. ಇವುಗಳಲ್ಲಿ 8 ಪ್ರಕರಣಗಳು ಬೇರೆ ಜಿಲ್ಲೆಗೆ ಸಂಬಂಧಿಸಿದ್ದಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next