ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇಗುಲದ ಧ್ವಜಸ್ತಂಭ ಪ್ರತಿಷ್ಠಾಪನೆ, ಧೂಳಿ ಮಂಡಲ ಸೇವೆ ಹಾಗೂ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕವು ಮಾ. 22ರಿಂದ 24ರ ವರೆಗೆ ನಡೆಯಲಿದೆ.
ಮಾ. 22ರ ಸಂಜೆ 5.30ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಶ್ರೀನಾಗೇಶ್ ಹೆಗ್ಡೆ ಅಧ್ಯಕ್ಷತೆ ವಹಿಸುವರು.
ಮಾ. 23ರ ಸಂಜೆ 5.30ರಿಂದ ನಡೆಯುವ ಧಾರ್ಮಿಕ ಸಭೆಯನ್ನು ಮಾಂಡವಿ ಬಿಲ್ಡರ್ನ ಜೆರ್ರಿ ವಿನ್ಸೆಂಟ್ ಡಯಾಸ್ ಉದ್ಘಾಟಿಸಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ ಅಧ್ಯಕ್ಷತೆ ವಹಿಸುವರು.
ಮಾ. 24ರ ಬೆಳಗ್ಗೆ 6ರಿಂದ ಪುಣ್ಯಾಹ ವಾಚನ, ಗಣಯಾಗ, ನಾಗ ಸಾನ್ನಿಧ್ಯದಲ್ಲಿ ಕಲಶಾಭಿಷೇಕ, ಆಶ್ಲೇಷಾ ಬಲಿ, ಮಹಾಪೂಜೆ, 7ಕ್ಕೆ ಧ್ವಜ ಸ್ತಂಭ ಪ್ರತಿಷ್ಠೆ, ಕಲಶಾಭಿ ಷೇಕ, 9.45ಕ್ಕೆ ಶ್ರೀ ದೇವಿಗೆ ಬ್ರಹ್ಮಕಲಶಾಭಿಷೇಕ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಸಂಜೆ 5ರಿಂದ ಹಾಲಿಟ್ಟು ಸೇವೆ, ಧೂಳಿ ಮಂಡಲ ಸೇವೆ, ಸಣ್ಣ ರಂಗಪೂಜೆ ನಡೆಯಲಿದೆ.
6.30ರಿಂದ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶಾಸಕ ರಘುಪತಿ ಭಟ್ ಉದ್ಘಾಟಿಸುವರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಡಾ| ಕಟ್ಟೆ ರವಿರಾಜ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿದಿನ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸುವರು ಎಂದು ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ಕಿಣಿ ತಿಳಿಸಿದ್ದಾರೆ.