Advertisement
ಸರಕಾರದ ಪರವಾಗಿ ಸಂಸದ ನಳಿನ್, ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಪುತ್ತೂರು ಡಿವೈಎಸ್‌ಪಿ ದಿನಕರ ಶೆಟ್ಟಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಪೊಲೀಸ್ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್, ಪಿಎಸ್‌ಐಗಳಾದ ಚಂದ್ರಶೇಖರ್, ಡಾ| ಸುಧಾಕರ್ ತೋನ್ಸೆ, ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ನಂದಾವರ ಕ್ಷೇತ್ರದ ಅಧ್ಯಕ್ಷ ಎ.ಸಿ. ಭಂಡಾರಿ ಗೌರವ ಸಲ್ಲಿಸಿದರು.
Related Articles
ಸೋಮವಾರ ಬೆಳಗ್ಗೆ ಕದ್ರಿ ಗೋಪಾಲನಾಥ್ ಅವರ ಪಾರ್ಥಿವ ಶರೀರವನ್ನು ನಗರದ ಖಾಸಗಿ ಆಸ್ಪತ್ರೆಯಿಂದ ಪದವಿನಂಗಡಿ ದೇವಿಕಟ್ಟೆಯಲ್ಲಿರುವ ಮನೆಗೆ ಕೊಂಡೊಯ್ಯಲಾಯಿತು. ಅಲ್ಲಿ ಕುಟುಂಬ ಸದಸ್ಯರು ಅಂತಿಮ ದರ್ಶನ ಪಡೆದರು. ಬಳಿಕ ಪಾರ್ಥಿವ ಶರೀರವನ್ನು ನಗರದ ಮಿನಿ ಪುರಭವನಕ್ಕೆ ಕೊಂಡೊಯ್ಯಲಾಯಿತು.
Advertisement
ಪುರಭವನದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆ ತನಕ ಜನಪ್ರತಿನಿಧಿಗಳು, ಕಲಾಭಿಮಾನಿಗಳು, ಕದ್ರಿಯವರ ಸಹ ಕಲಾವಿದರು, ಶಿಷ್ಯಂದಿರು, ಅಭಿಮಾನಿಗಳು, ಹಿತೈಷಿಗಳು, ಸಂಗೀತ ಕಲಾವಿದರು, ಸ್ನೇಹಿತರು, ಸರಕಾರಿ ಅಧಿಕಾರಿಗಳು ಮತ್ತು ಸಾರ್ವಜನಿಕರು ಶ್ರದ್ಧಾಂಜಲಿ ಸಲ್ಲಿಸಿದರು. ತಮಿಳುನಾಡಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಅವರ ಶಿಷ್ಯರು, ಕಲಾವಿದರು, ಅಭಿಮಾನಿಗಳು ಆಗಮಿಸಿದ್ದರು. ಸರಕಾರ ಮತ್ತು ಜಿಲ್ಲಾಡಳಿತದ ಪರವಾಗಿ ಅಂತಿಮ ನಮನ ಸಲ್ಲಿಸಲಾಯಿತು.
ಕದ್ರಿ ಗೋಪಾಲನಾಥ್ ಅವರ ಪತ್ನಿ ಸರೋಜಿನಿ, ಪುತ್ರರಾದ ಮಣಿಕಾಂತ್ ಕದ್ರಿ ಮತ್ತು ಗುರುಪ್ರಸಾದ್ ಕದ್ರಿ, ಪುತ್ರಿ ಅಂಬಿಕಾ ಮತ್ತು ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದರು. ಪುತ್ರ ಗುರುಪ್ರಸಾದ್ ಕುವೈಟ್‌ನಲ್ಲಿದ್ದ ಕಾರಣ ಅಂತ್ಯಕ್ರಿಯೆಯನ್ನು ಸೋಮವಾರಕ್ಕೆ ನಿಗದಿಪಡಿಸಲಾಗಿತ್ತು. ಅವರು ಸೋಮವಾರ ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು.
ಸ್ಮಾರಕ ನಿರ್ಮಾಣ: ಕದ್ರಿಯವರು ಸ್ಯಾಕ್ಸೋಫೋನ್ ವಾದನದ ಮೂಲಕ ವಿಶ್ವಕ್ಕೆ ಪರಿಚಿತರಾಗಿದ್ದಾರೆ. ಅವರ ಹೆಸರನ್ನು ಶಾಶ್ವತವಾಗಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡುವ ಉದ್ದೇಶವಿದೆ. ಆದರೆ ಎಲ್ಲಿ, ಹೇಗೆ ಎಂಬುದನ್ನು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸುದ್ದಿಗಾರರಿಗೆ ತಿಳಿಸಿದರು.
ಶ್ರದ್ಧಾಂಜಲಿ ಸಭೆ: ಸಮಾಜದ ಎಲ್ಲರನ್ನು ಸೇರಿಸಿಕೊಂಡು ಸಾರ್ವಜನಿಕ ಶ್ರದ್ಧಾಂಜಲಿ ಸಭೆಯೊಂದನ್ನು ಮಂಗಳೂರಿನಲ್ಲಿ ನಡೆಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಕದ್ರಿ ಗೋಪಾಲನಾಥ್ ಅವರ ಕುಟುಂಬದವರಿಗೆ ತಿಳಿಸಿದರು.