Advertisement

ಕಾಡಸಿದ್ದೇಶ್ವರ ಸ್ವಾಮೀಜಿ ಕಾರು ಅಪಘಾತ: ಇಬ್ಬರ ದುರ್ಮರಣ; ಸ್ವಾಮೀಜಿಗೆ ಗಂಭೀರ ಗಾಯ

01:38 PM Jun 17, 2023 | Team Udayavani |

ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಆಗಮಿಸುತ್ತಿದ್ದ ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ‌ ಶ್ರೀ ಕಾಡಸಿದ್ದೇಶ್ವರ ಸ್ವಾಮೀಜಿಗಳ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸ್ವಾಮೀಜಿ ಸೇರಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

Advertisement

ಬೆಳಗಾವಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರ ಹೊನಗಾ- ಬೆನ್ನಾಳಿ ಬ್ರಿಡ್ಜ್ ಬಳಿ ಎರಡು ಲಾರಿ ಹಾಗೂ ಕಾರು ಅಪಘಾತ ಸಂಭವಿಸಿದೆ.

ಪ್ರತಿಭಟನೆಯಲ್ಲಿ ಭಾಗವಹಿಸಲು ಬೆಳಗಾವಿಗೆ ಬರುತ್ತಿದ್ದ ಶ್ರೀಕಾಡಸಿದ್ದೇಶ್ವರ ಸ್ವಾಮೀಜಿ ಕಾರು, ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಅಪಘಾತಕ್ಕೀಡಾಗಿದೆ. ಮತಾಂತರ ನಿಷೇಧ ಕಾಯ್ದೆ ರದ್ದು ವಿರೋಧಿಸಿ ಶನಿವಾರ ಬೆಳಗಾವಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದರು.

ಇದನ್ನೂ ಓದಿ:‘ರಾಜಕಾರಣ ಅಷ್ಟೊಂದು ಚೆನ್ನಾಗಿಲ್ಲ, ಸಾಕಾಗಿದೆ..’: ಡಿಕೆ ಸುರೇಶ್ ರಾಜಕೀಯ ವೈರಾಗ್ಯದ ಮಾತು

ಶಿವಾಪುರ ಗ್ರಾಮದ ಮುಪ್ಪಿನ ಕಾಡಸಿದ್ದೇಶ್ವರ ಮಠದ‌ ಶ್ರೀಕಾಡಸಿದ್ದೇಶ್ವರ ಸ್ವಾಮೀಜಿಗೆ ಗಂಭೀರ ಗಾಯಗಳಾಗಿವೆ. ವಾಹನದಲ್ಲಿದ್ದ ಸ್ವಾಮೀಜಿಯ ಇಬ್ಬರು ಸೇವಕರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಾಕತಿ ಠಾಣೆ ಪೊಲೀಸರ ಭೇಟಿ, ನೀಡಿ ಕಾಡಸಿದ್ಧೇಶ್ವರ ಸ್ವಾಮೀಜಿ ಅವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಬೆಳಗಾವಿಯ ಜಿಲ್ಲಾಸ್ಪತ್ರೆಯ ಐಸಿಯುದಲ್ಲಿ ಕಾಡಸಿದ್ಧೇಶ್ವರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿ ಸೇವಕರಿಬ್ಬರ ಮೃತದೇಹಗಳನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ.

Advertisement
Advertisement

Udayavani is now on Telegram. Click here to join our channel and stay updated with the latest news.

Next