Advertisement

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

11:12 AM Jul 26, 2024 | Team Udayavani |

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಜಾನಪದ ಸಾಹಿತ್ಯಕ್ಕೆ ಸಾಕ್ಷಿಯಾಗಿರುವ ಮದಗದ ಕೆರೆ ಕೋಡಿ ಬಿದ್ದಿದೆ.

Advertisement

336 ಹೆಕ್ಟೇರ್, 2036 ಎಕರೆ ವಿಸ್ತೀರ್ಣದ ಬೃಹತ್ ಕೆರೆ ಈಗ ನೋಡಲು ಸಮುದ್ರದಂತೆ ಭಾಸವಾಗುತ್ತಿದೆ.

ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದಲ್ಲಿರುವ ಮದಗದ ಕೆರೆ ಸುತ್ತಲೂ ಮುಗಿಲೆತ್ತರದ ಬೆಟ್ಟ-ಗುಡ್ಡಗಳು ಮಧ್ಯದಲ್ಲಿದೆ. ಈ ಕೆರೆ ತುಂಬಿದ್ರೆ ಕಡೂರು ತಾಲೂಕಿನ ನೀರಿನ ಬವಣೆ ತಪ್ಪಲಿದೆ. ಕೆರೆ ತಪ್ಪಲಿನ 34 ಹಳ್ಳಿಯ ಜನ-ಜಾನುವಾರುಗಳಿಗೆ ಈ ನೀರೇ ಜೀವಜಲವಾಗಿದ್ದು, ಕೆರೆಯಲ್ಲಿ ನೀರು ಕಂಡು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಪಶ್ಷಿಮಘಟ್ಟಗಳ ಸಾಲಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕೆರೆಗೆ ನೀರು ಹರಿದು ಬರುತ್ತಿದೆ. ಇದೀಗ ಕೆರೆ ಕೋಡಿ ಬಿದ್ದ ಕಾರಣ ನೀರು ಹರಿದು ಮಾರಿಕಣಿವೆ ಡ್ಯಾಂ ಸೇರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next