Advertisement

Kadur; ಧಾರಾಕಾರ ಮಳೆಗೆ ಗೋಡೆ ಕುಸಿದು ವ್ಯಕ್ತಿ ಸಾವು

12:27 PM Nov 07, 2023 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಓರ್ವ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ತಾಲೂಕಿನಲ್ಲಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಈ ಘಟನೆ ಸಂಭವಿಸಿದೆ. ಲಚ್ಚಾನಾಯ್ಕ (80) ಮೃತ ವ್ಯಕ್ತಿ.

ಕಳೆದ ರಾತ್ರಿ ಲಚ್ಚಾನಾಯ್ಕ ಎಂಬುವವರು ಶೌಚಾಲಯಕ್ಕೆ ತೆರಳುವ ವೇಳೆ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next