Advertisement
ಕಳೆದ ಜೂನ್ 29 ರಂದು ಈತನ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬುಧವಾರ ವರದಿ ಬಂದಿದ್ದು, ಪಾಸಿಟಿವ್ ಎಂದು ಗೊತ್ತಾಗಿದೆ. ಈ ಯುವಕನನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಯುವಕನ ಮನೆಯ ಬೀದಿ ಹಾಗೂ ಸುತ್ತಮುತ್ತಲ ಪ್ರದೇಶವನ್ನು ಸೀಲ್ಡೌನ್ಮಾಡಿದ್ದಾರೆ. ಅಲ್ಲದೇ, ಬೀದಿಗಳಿಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ.