“ಕಾಗದ’ ಎಂಬ ಟೀನೇಜ್ ಲವ್‌ಸ್ಟೋರಿ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜುಲೈ 5ರಂದು ತೆರೆಕಾಣು ತ್ತಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾ ಯಿತು. ಈ ಸಿನಿಮಾವನ್ನು ರಂಜಿತ್ ನಿರ್ದೇಶನ ಮಾಡಿದ್ದು, ಅರುಣ್ ಕುಮಾರ್ ನಿರ್ಮಾಣ ಮಾಡಿದ್ದಾರೆ.
“ಇದು 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್ ಬಂದಿರದ, ಕಾಗದದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ ಕಾಗದ ಚಿತ್ರ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತದೆ’ ಎನ್ನುವುದು ನಿರ್ದೇಶಕ ರಂಜಿತ್ ಮಾತು.
ನಿರ್ಮಾಪಕ ಅರುಣ್ ಕುಮಾರ್ ಮಾತನಾಡಿ, “ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. ರಗಡ್ ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ’ ಎಂದರು
ನಿರ್ಮಾಪಕ ಅರುಣ್ ಕುಮಾರ್. ನಾಯಕ ಆದಿತ್ಯ ಮಾತನಾಡಿ, “ನಮ್ಮ ಮನೆಯ ಕೆಳಗಡೆ ಆಕ್ಟಿಂಗ್ ಸ್ಕೂಲ್ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ’ ಎಂದರು.
ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಅಂಕಿತಾ ಜಯರಾಂ ಈ ಚಿತ್ರದ ನಾಯಕಿ.