Advertisement
ಮಂಗಳವಾರ ಸಭಾಧ್ಯಕ್ಷ ಹುದ್ದೆಗೆ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಬುಧವಾರ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ.
ನಮ್ಮ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕರು ಎಲ್ಲರೂ ಸೇರಿ ನನ್ನನ್ನು ಸಭಾಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ನಾನು ನಿಷ್ಠಾವಂತನಾಗಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ.
• ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಸ್ಥಾನದ ಅಭ್ಯರ್ಥಿ
• ವಿಶ್ವೇಶ್ವರ ಹೆಗಡೆ ಕಾಗೇರಿ, ಸ್ಪೀಕರ್ ಸ್ಥಾನದ ಅಭ್ಯರ್ಥಿ
ವಿಶ್ವೇಶ್ವರ ಹೆಗಡೆ ಕಾಗೇರಿ ಪಕ್ಷದ ನಿಷ್ಠಾವಂತ ಸ್ವಯಂ ಸೇವಕ. ಇಂತಹ ಸ್ವಯಂ ಸೇವಕ ಈಗ ಸಭಾಧ್ಯಕ್ಷರಂತಹ ಉನ್ನತ ಹುದ್ದೆಗೆ ಏರಿದ್ದಾರೆ. ಅವರಿಗೆ ಅಭಿನಂದನೆಗಳು.
● ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ
● ಕೆ.ಎಸ್.ಈಶ್ವರಪ್ಪ, ಮಾಜಿ ಉಪ ಮುಖ್ಯಮಂತ್ರಿ