ಬೆಂಗಳೂರು: ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು.
Advertisement
ವಿಧಾನಸಭೆ ಹಾಗೂ ವಿಧಾನ ಪರಿಷತ್ ಪ್ರಶಸ್ತಿಗೆ ಮಾನದಂಡಗಳನ್ನು ಸೂಚಿಸುವ ಎಲ್ಲ ರಾಜ್ಯಗಳ ವಿಧಾನಸಭಾಧ್ಯಕ್ಷರ ಸಮಿತಿ ಅಧ್ಯಕ್ಷರಾಗಿರುವ ಕಾಗೇರಿ ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವರದಿ ಸಲ್ಲಿಸಿದ್ದರು.
ಆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹಾಗೂ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು.